Breaking News

2020-21ನೇ ಸಾಲಿನಲ್ಲಿ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ ಬಂದ ಹಣವೆಷ್ಟು ಗೊತ್ತೇ..?

Spread the love

ಬೆಂಗಳೂರು, ಮಾ.4-ಪೆಟ್ರೋಲ್, ಡೀಸೆಲ್ ಮೇಲೆ ವಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ಗಳ ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್‍ಕೆ.ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕೇರಳ ಹೊರತು ಪಡಿಸಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರಕ್ಕೆ ಸಂಗ್ರಹವಾಗುತ್ತಿರುವ ತೆರಿಗೆ ಬಗ್ಗೆ ನಮ್ಮಲ್ಲಿ ಮಾಹಿತಿ ಇದೆ. ಕೇಂದ್ರ ಸರ್ಕಾರಕ್ಕೆ ಸಂಗ್ರಹವಾಗಿರುವ ತೆರಿಗೆ ಸಂಗ್ರಹದ ಬಗ್ಗೆ ಮಾಹಿತಿ ಇಲ್ಲ. ಪೆಟ್ರೋಲ್, ಡೀಸೆಲ್ ಮೇಲಿನ ಶುಲ್ಕವನ್ನು ಕಡಿಮೆ ಮಾಡುವ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.ಪ್ರಶ್ನೆ ಕೇಳಿದ ಪ್ರಕಾಶ್ ರಾಥೋಡ್ ಅವರು, ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿ ಹೋಗುತ್ತಿದ್ದಾರೆ. ಅದು ಸರ್ಕಾರದ ಗಮನಕ್ಕೂ ಬಂದಿದೆ. ಆದರೂ ತೆರಿಗೆ ಕಡಿಮೆ ಮಾಡದೇ ಇರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಕಾಂಗ್ರೆಸ್ ಸದಸ್ಯ ಬಿ.ಎಂ.ಫಾರುಕ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಅವರ ಪರವಾಗಿ ಉತ್ತರಿಸಿದ ಕೋಟಾ ಶ್ರೀನಿವಾಸಪೂಜಾರಿ ಅವರು, ರಾಜ್ಯದಲ್ಲಿ 13ಸಾವಿರ ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ. ನವೀಕರಿಸಬಹುದಾದ ಇಂಧನ ಯೋಜನೆಗಳ ಸಾಮಥ್ರ್ಯ 15,052ಮೆಗಾವ್ಯಾಟ್ ಮೀರಿದೆ. ಹೀಗಾಗಿ ವಿದ್ಯುತ್ ಬ್ಯಾಂಕಿಂಗ್ ಸೌಲಭ್ಯವನ್ನು ವಾಪಸ್ ಪಡೆಯಲಾಗಿದೆ ಎಂದು ಹೇಳಿದರು.
ವಿದ್ಯುತ್ ಬ್ಯಾಂಕಿಂಗ್‍ನಿಂದಾಗಿ ಆರ್ಥಿಕ ಏರುಪೇರಾಗುತ್ತಿವೆ. ದರ ಕಡಿಮೆ ಇದ್ದಾಗ, ಹೆಚ್ಚು ಇದ್ದಾಗ ವಿದ್ಯುತ್ ಉತ್ಪಾದನೆ ಮಾರಾಟದಲ್ಲಿ ವ್ಯತ್ಯಯಗಳಾಗುತ್ತಿವೆ. ಹಾಗಾಗಿ ಬ್ಯಾಂಕಿಂಗ್ ಸೌಲಭ್ಯವನ್ನು ನಿಲ್ಲಿಸಲಾಗಿದೆ ಎಂದರು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ