ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಗುರುವಾರ ಗೈರಾಗಿರುವ ದೂರುದಾರ ದಿನೇಶ್ ಕಲ್ಲಹಳ್ಳಿ,
‘ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಾ. 2ರಂದು ದೂರು ನೀಡಿದ್ದೇನೆ. ಅದರ ಹೆಚ್ಚಿನ ವಿಚಾರಣೆಗೆ ಠಾಣೆಗೆ ಬರುವಂತೆ ನೋಟಿಸ್ ನೀಡಿದ್ದಿರಾ. ಈ ಬಗ್ಗೆ ಈಗಾಗಲೇ ರಾಮನಗರ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ. ಭದ್ರತೆ ಇಲ್ಲದ ಕಾರಣದಿಂದಾಗಿ ವಿಚಾರಣೆಗೆ ಬರಲು ಆಗುವುದಿಲ್ಲ’ ಎಂದೂ ಪತ್ರದಲ್ಲಿ ದಿನೇಶ್ ತಿಳಿಸಿದ್ದಾರೆ.
‘ನನಗೆ ಸೂಕ್ತ ಭದ್ರತೆ ನೀಡಿದರೆ, ಮಾ. 9ರಂದು ತಮ್ಮ ಎದುರು ವಿಚಾರಣೆಗೆ ಹಾಜರಾಗುತ್ತೇನೆ’ ಎಂದೂ ಅವರು ಉಲ್ಲೇಖಿಸಿದ್ದಾರೆ.
Laxmi News 24×7