Breaking News

ಮಗಳನ್ನು ಕತ್ತರಿಸಿ, ರುಂಡ ಸಮೇತ ಸ್ವಯಂ ಪೊಲೀಸರಿಗೆ ಶರಣಾದ ತಂದೆ

Spread the love

ಲಖನೌ: ಉತ್ತರ ಪ್ರದೇಶದ ಹರದೋಯಿ ಜಿಲ್ಲೆಯ ಮಾಜ್ ಹಿಲಾದಲ್ಲಿ ತಂದೆಯೊಬ್ಬ ತನ್ನ 17 ವರ್ಷದ ಮಗಳ ರುಂಡ ಕತ್ತರಿಸಿರುವ ಭಯಾನಕ ಘಟನೆ ನಡೆದಿದೆ.

ತರಕಾರಿ ಮಾರಾಟ ಮಾಡುವ ಸರ್ವೇಶ್ ಕುಮಾರ್ ಮಗಳು ಯುವಕನೊಂದಿಗೆ ಸಂಬಂಧ ಹೊಂದಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದ. ನಿನ್ನೆ ಸುಮಾರು ಮೂರು ಗಂಟೆಯ ಹೊತ್ತಿಗೆ ಮಗಳು ಪ್ರಿಯತಮನ ಜತೆಗೆ ಇರುವುದನ್ನು ಕಂಡು ಸಿಟ್ಟುಗೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಆತ ಹರಿತವಾದ ಚಾಕು ತಂದು ಮಗಳ ತಲೆ ಕತ್ತರಿಸಿದ್ದಾನೆ.

ಅಷ್ಟೇ ಅಲ್ಲದೆ, ಮಗಳ ರುಂಡವನ್ನು ಛೇದಿಸಿ ಅದರ ಸಹಿತವಾಗಿ ಎರಡು ಕಿಲೋಮೀಟರ್ ದೂರದ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.ಈತ ಹೀಗೆ ಹೋಗುತ್ತಿರುವುದನ್ನು ನೋಡಿದ ಜನ ಬೆಚ್ಚಿಬಿದ್ದಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮಗಳಿಗೆ ಈ ರೀತಿಯ ಸಂಬಂಧ ಇರುವುದನ್ನು ತಿಳಿದು ಸಿಟ್ಟಿನಿಂದ ಇಂಥದ್ದೊಂದು ಘನಘೋರ ಕೃತ್ಯ ಎಸಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ