ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಆಡಳಿತರೂಢ ಎಐಎಡಿಎಂಕೆ ಹಾಗೂ ಪ್ರತಿಪಕ್ಷ ಡಿಎಂಕೆ ಚುನಾವಣೆ ತಯಾರಿಯಲ್ಲಿ ತೊಡಗಿದ್ದು, ಸೀಟು ಹಂಚಿಕೆ ಕುರಿತಂತೆ ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿವೆ.
ಖ್ಯಾತ ನಟ ಕಮಲಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷವೂ ಕೂಡ ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದು, ಇದೀಗ ಅವರ ಪಕ್ಷಕ್ಕೆ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಆಪ್ತರೊಬ್ಬರು ಸೇರ್ಪಡೆಗೊಂಡಿದ್ದಾರೆ.
ಎಪಿಜೆ ಅಬ್ದುಲ್ ಕಲಾಂ ಅವರು ರಾಷ್ಟ್ರಪತಿಗಳಾಗಿದ್ದ ಸಂದರ್ಭದಲ್ಲಿ ಅವರ ವೈಜ್ಞಾನಿಕ ಸಲಹೆಗಾರ ಮತ್ತು ವಿಶೇಷ ಕರ್ತವ್ಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ವಿ. ಪೊನ್ರಾಜ್ ಕಮಲ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.
Laxmi News 24×7