Breaking News

ಮಾಜಿ ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

Spread the love

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಫೋಟೋ ಒಂದು ಸಖತ್ ವೈರಲ್ ಆಗಿದೆ. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಜನಧ್ವನಿ ಜಾಥಾ ಆರಂಭಕ್ಕೂ ಮೊದಲು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಹೆಮಾನ್ ಖಾನ್ ಅವರ ಕಾಲು ಹಿಡಿದು ಡಿಕೆಶಿ ಆಶೀರ್ವಾದ ಪಡೆದಿದ್ದರು.

ಇದರಲ್ಲಿ ಡಿಕೆಶಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ್ದು, ಆಗ ಸಿದ್ದರಾಮಯ್ಯ ಡಿಕೆಶಿ ಅವರನ್ನು ಬೆನ್ನು ತಟ್ಟುವ ಫೋಟೋವನ್ನು ಸಿದ್ದರಾಮಯ್ಯ ಬೆಂಬಲಿಗರು ವೈರಲ್ ಮಾಡಿದ್ದಾರೆ. ಕೆಲದಿನಗಳ ಹಿಂದೆ ಮೈಸೂರು ಮೇಯರ್ ಚುನಾವಣೆಯ ವಿಷಯವಾಗಿ ಸಿದ್ದು ಮತ್ತು ಡಿಕೆಶಿ ನಡುವೆ ಭಿನ್ನಾಭಿಪ್ರಾಯವಿತ್ತು.

ಇದಾದ ಬಳಿಕ ಇದೀಗ ಡಿಕೆಶಿ, ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿರುವುದು ಸಿದ್ದು ಅಭಿಮಾನಿಗಳಿಗೆ ಸಂತಸ ಕೊಟ್ಟಿದೆ. ಟಗರು ಕಾಲಿಗೆ ಬಂಡೆ ನಮಸ್ಕರಿಸಿದ ಫೋಟೋವನ್ನು ಕಂಡು ಸಿದ್ದು ಅಭಿಮಾನಿಗಳು ಹೇಗೆ ನಮ್ಮ ಬಾಸ್, ನಮ್ಮ ಬಾಸ್ ಪವರ್ ಎಂದು ಹಲವು ಬಗೆಯ ಕಾಮೆಂಟ್ ಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.


Spread the love

About Laxminews 24x7

Check Also

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ

Spread the loveವಿಧಾನ ಪರಿಷತ್ (ವಿಧಾನಸೌಧ): ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ