Breaking News

ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದ: ರಮೇಶ ಜಾರಕಿಹೊಳಿ ಅವರು

Spread the love

ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಅಭಿನಂದಿಸಿದರು.

ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದರು.

ಗೋಕಾಕ ಶಿಕ್ಷಣಾಧಿಕಾರಿ ಜಿ. ಬಿ. ಬಳಿಗಾರ ಮಾತನಾಡಿ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಹಾಯವಾಗಲೆಂದು 5 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಮೂಲಕ ಸಚಿವ ರಮೇಶ ಜಾರಕಿಹೊಳಿ ಅವರು ವಿದ್ಯಾರ್ಥಿಗಳ ಹುರುದುಂಬಿಸುವ ಕೆಲಸ ಮಾಡುತಿದ್ದಾರೆ. ಇದೇ ರೀತಿ ಮುಂದೆಯೂ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ತಲುಪಿ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ