Breaking News

ರಮೇಶ್ ಜಾರಕಿಹೊಳಿ ಪರ ಪ್ರತಿಭಟನೆ : ಬೆಂಕಿಯಲ್ಲಿ ಬಿದ್ದ ಅಭಿಮಾನಿ

Spread the love

ಬೆಳಗಾವಿ : ರಾಮೇಶ್ ಜಾರಕಿಹೊಳಿ ಪರವಾಗಿ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಬೆಂಕಿಯಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಗೋಕಾಕ್ ನಗರದ ಬಸವೇಶ್ವರ ವೃತ್ತದಲ್ಲಿ ರಮೇಶ ಜಾರಕಿಹೊಳಿ‌ ಬೆಂಬಲಿಸಿ ಪ್ರತಿಭಟನೆ ನಡೆಸಲಾಯಿತು.‌ ಈ ವೇಳೆ ರಾಮೇಶ್ ಪರ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಪ್ರತಿಭಟನಾಕಾರನೋರ್ವ ಬೆಂಕಿಯಲ್ಲಿಯೇ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಂಕಿಯಲ್ಲಿ ಬೀಳುತ್ತಿದ್ದಂತೆ ಕೂಡಲೇ ಧಾವಿಸಿದ ಪೊಲೀಸರು ಆತನನ್ನು ತಡೆಯಲು ಯತ್ನಿಸಿದ್ದರೂ, ಸ್ವಲ್ಪ ಗಾಯಗಳಾಗಿವೆ.‌ ನಂತರ ಈತನನ್ನು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ