Breaking News

ಪೆಟ್ರೋಲ್-ಡೀಸೆಲ್‌ನಿಂದ ರಾಜ್ಯಕ್ಕೆ ₹12,342 ಕೋಟಿ ತೆರಿಗೆ

Spread the love

ಬೆಂಗಳೂರು: ‘ಡೀಸೆಲ್‌ ಮತ್ತು ಪೆಟ್ರೋಲ್‌ನಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ ₹12,432 ಕೋಟಿ ತೆರಿಗೆ ಬಂದಿದೆ’ ಎಂದು ರಾಜ್ಯ ಸರ್ಕಾರ ಹೇಳಿದೆ.

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನ ಪ್ರಕಾಶ್‌ ರಾಠೋಡ್‌ ಪ್ರಶ್ನೆ ಕೇಳಿದ್ದರು.

‘ದಕ್ಷಿಣದ ರಾಜ್ಯಗಳಿಗೆ ಹೋಲಿಸಿದಾಗ ಕೇರಳ ಬಿಟ್ಟು ಪೆಟ್ರೋಲ್‌, ಡೀಸೆಲ್‌ ಬೆಲೆ ನಮ್ಮ ರಾಜ್ಯದಲ್ಲಿಯೇ ಕಡಿಮೆ ಇದೆ. ಆದರೆ, ಈ ಮೂಲದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರಿಗೆ ಬಂದಿದೆ ಎಂಬ ಮಾಹಿತಿ ಇಲ್ಲ’ ಎಂದು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

₹11,355 ಕೋಟಿ ಬಾಕಿ: ‘ಈ ಸಾಲಿನ ಜನವರಿಯವರೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ₹11,355 ಕೋಟಿ ಜಿಎಸ್‌ಟಿ ಪರಿಹಾರ ಬಾಕಿ ಇದೆ’ ಎಂದು ಸರ್ಕಾರ ಹೇಳಿದೆ


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ