Breaking News
Home / ರಾಜ್ಯ / ತಮ್ಮ ವಿರುದ್ಧ ಸುದ್ದಿ ಪ್ರಕಟಿಸಬಾರದು ಇನ್ನೂ 6 ಸಚಿವರು ಇಂದು ನ್ಯಾಯಾಲಯಕ್ಕೆ

ತಮ್ಮ ವಿರುದ್ಧ ಸುದ್ದಿ ಪ್ರಕಟಿಸಬಾರದು ಇನ್ನೂ 6 ಸಚಿವರು ಇಂದು ನ್ಯಾಯಾಲಯಕ್ಕೆ

Spread the love

ಜಾರಕಿಹೊಳಿ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ.

ರಾಜ್ಯದ ಸಮ್ಮಿಶ್ರ ಸರಕಾರ ಕೆಡವಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ ತರುವುದ್ಕಕಾಗಿ ಮುಂಬೈಗೆ ತೆರಳಿದ್ದ ಸಚಿವರಾದ ಭೈರತಿ ಬಸವರಾಜ, ಶಿವರಾಮ ಹೆಬ್ಬಾರ್, ಡಾ.ಕೆ.ಸುಧಾಕರ, ಎಸ್.ಟಿ.ಸೋಮಶೇಖರ, ಬಿ.ಸಿ.ಪಾಟೀಲ, ನಾರಾಯಣ ಗೌಡ ನ್ಯಾಯಾಲಯಕ್ಕೆ ಮೊರೆ ಹೋದವರು.

ಇವರ ಜೊತೆಗೆ ಇಂದು ಇನ್ನೂ 6 ಸಚಿವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ನಾವು ಮುಂಬೈಗೆ ಹೊದವರೆಲ್ಲ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂದು ಸೋಮಶೇಖರ ಹೇಳಿದ್ದಾರೆ. ನಮ್ಮ ವಿರುದ್ಧ ಮೊದಲಿನಿಂದಲೂ ಷಢ್ಯಂತ್ರ ನಡೆಯುತ್ತಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸಬಾರದು ಎಂದು ಒಟ್ಟೂ 67 ಮಾಧ್ಯಮಗಳನ್ನು ಎದುರುದಾರರನ್ನಾಗಿಸಿ ಈ ಸಚಿವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಂದು ಅರ್ಜಿಯ ವಿಚಾರಣೆ ನಡೆಯಲಿದೆ.

ತಮ್ಮ ಬಳಿ ಹಲವರ ಸಿಡಿಗಳಿವೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಹೇಳಿಕೆ ನೀಡಿದ ಬೆನ್ನಲ್ಲೇ ಈ ಸಚಿವರು ನ್ಯಾಯಾಲಯಕ್ಕೆ ಹೋಗಿರುವುದು ಕುತೂಹಲ ಮೂಡಿಸಿದೆ. ರಾಜಶೇಖರ ಮುಲಾಲಿ ಅವರನ್ನು 68ನೇ ಪ್ರತಿವಾದಿಯನ್ನಾಗಿಸಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ