Breaking News

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ : ಶೀಘ್ರ ಪೆಟ್ರೋಲ್ 100, ಎಲ್ ಪಿಜಿ 1000 ರೂ.ಗೆ ಏರಿಕೆ?

Spread the love

ನವದೆಹಲಿ : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಭಾರತದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 1000 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

ತೈಲ ಹಾಗೂ ಅನಿಲ ಉತ್ಪಾದನೆ ಹೆಚ್ಚಿಸಲು ಕೊಲ್ಲಿ ರಾಷ್ಟ್ರಗಳು ನಿರಾಕರಿಸಿದ್ದು, ಇದರಿಂದಾಗಿ ಪೂರೈಕೆ ಕುಂಠಿತಗೊಳ್ಳುವುದು ಮುಂದುವರೆಯಲಿದ್ದು, ಕಚ್ಚಾ ತೈಲ ಬೆಲೆ ಒಂದೇ ದಿನ 4 ಡಾಲರ್ ನಷ್ಟು ನೆಗೆದಿದೆ. ಹೀಗಾಗಿ ಪೆಟ್ರೋಲ್ ಬೆಲೆ 100 ರೂ. ಎಲ್ ಪಿಜಿ ಸಿಲಿಂಡರ್ ಬೆಲೆ 1000 ರೂ. ತಲುಪುವ ಆತಂಕ ಎದುರಾಗಿದೆ.

ಗುರುವಾರ ಸೌದಿ ಅರೇಬಿಯಾ ನೇತೃತ್ವದ ಒಪೆಕ್ ದೇಶಗಳು ಆನ್ ಲೈನ್ ಸಭೆ ನಡೆಸಿದ್ದವು. ಈ ಸಭೆಯಲ್ಲಿ ತೈಲ ಉತ್ಪಾದನೆ ಹಾಗೂ ಪೂರೈಕೆಯನ್ನು ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಶಾಲೆಯ ಛಾವಣಿ ಕುಸಿತ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಲಗೇಕರ್

Spread the loveಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಶಾಲೆ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ