ಬೆಂಗಳೂರು: ಮಾಜಿ ಸಚಿವರ ವಿರುದ್ಧದ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಿಡಿ ಪ್ರಕರಣಕ್ಕೆ ಕನಕಪುರ ಮತ್ತು ಬೆಳಗಾವಿ ಕಡೆಯವರು ಕಾರಣ. ಈ ವಿಡಿಯೋ ಬರಲು ಕನಕಪುರ, ಬೆಳಗಾವಿಯವರೇ ಕಾರಣ ಎಂದರು.
ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಕನಕಪುರ ಮತ್ತು ಬೆಳಗಾವಿಯವರ ರಾಜಕೀಯ ಷಡ್ಯಂತ್ರ ಇದೆ. ಮುಂದಿನ ದಿನಗಳಲ್ಲಿ ಅವರು ಅನುಭವಿಸುತ್ತಾರೆ ಎಂದು ಸಿಪಿ ಯೋಗೇಶ್ವರ್ ಹೇಳಿದರ
ಆರು ಜನ ಸಚಿವರು ಯಾಕೆ ಕೋರ್ಟ್ ಗೆ ಹೋಗಿದ್ದಾರೋ ಗೊತ್ತಿಲ್ಲ. ಆ ಸಚಿವರನ್ನೇ ಕೇಳಬೇಕು. ಅವರ ವೈಯಕ್ತಿಕ ರಕ್ಷಣೆಗೆ ಕೋರ್ಟ್ ಮೊರೆ ಹೊಗಿರಬಹುದು. ಯಾರು ಕೋರ್ಟ್ ಮೊರೆ ಹೋಗಿದ್ದಾರೋ ಅವರನ್ನೇ ಕೇಳಿ ಎಂದರು.
ಮೈತ್ರಿ ಸರ್ಕಾರ ಬೀಳಿಸಿದ ಕಾರಣ ಕೆಲವರು ಷಡ್ಯಂತ್ರ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ರಾಜಕೀಯ ಪಿತೂರಿ ನಡೆದಿದೆ. ರಾಜಕೀಯ ಷಂಡ್ಯಂತ್ರದಿಂದ ನಡೆದಿದೆ. ಈ ವಿಚಾರದಲ್ಲಿ ನನ್ನನ್ನು ಎಳೆಯಬೇಡಿ ಎಂದು ಯೋಗೇಶ್ವರ್ ಹೇಳಿದರು
 Laxmi News 24×7
Laxmi News 24×7
				 
		 
						
					