Breaking News

‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಸುಧಾಕರ್ ಅವರದೂ ಸಿಡಿ ಇದೆಯಾ? ಎಂದ ಸಿದ್ದರಾಮಯ್ಯ

Spread the love

ಬೆಂಗಳೂರು: ‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಮಾಧ್ಯಮಗಳು ಯಾವುದೇ ರೀತಿಯ ಸುದ್ದಿ ಪ್ರಸಾರ ಮಾಡದಂತೆ ಕೆಲ ಸಚಿವರುಗಳು ಮುಂಜಾಗ್ರತೆಯಾಗಿ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಿಡಿ ಇದೆ ಎಂದು ಗೊತ್ತಿದ್ದರೆ ಮಾತ್ರ ಅದನ್ನು ರಾಜಕೀಯ ಷಡ್ಯಂತ್ರ ಎಂದು ಹೇಳಿಕೊಳ್ಳುತ್ತಾರೆ. ಹಾಗಾದರೆ ಸಚಿವ ಸುಧಾಕರ್ ಅವರದು ಸಿಡಿ ಇದೆಯಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ಕೆಲವರು ಮಾಡುವ ತಪ್ಪುಗಳಿಂದ ಜನ ಶಾಪ ಹಾಕುತ್ತಿದ್ದಾರೆ. ರಾಜಕಾರಣಿಗಳು ಎಂದರೆ ಲಫಂಗರು ಎನ್ನುವ ರೀತಿ ಆಗಿದೆ. ಸಮಾಜಕ್ಕೆ ರಾಜಕಾರಣಿಗಳ ಬಗ್ಗೆ ತಪ್ಪು ಗ್ರಹಿಕೆ ರವಾನೆಯಾಗುವಂತೆ ನಡೆದುಕೊಳ್ಳುತ್ತಿದ್ದಾರೆ’ ಎಂದು ಸುದ್ದಿಗಾರರ ಬಳಿ ಬೇಸರ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ