Breaking News
Home / Uncategorized / ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಅರೆಸ್ಟ್

ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಅರೆಸ್ಟ್

Spread the love

ಶಿವಮೊಗ್ಗ, ಮಾ.6- ವಿಧಾನಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದ ಪ್ರಕರಣದಲ್ಲಿ ಪೊಲೀಸರು ಶಾಸಕರ ಪುತ್ರನನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ.ಕಳೆದ ವಾರ ಭದ್ರಾವತಿಯಲ್ಲಿ ನಡೆದ ಕಬಡ್ಡಿ ಅಂತಿಮ ಪಂದ್ಯದ ವೇಳೆ ಗಲಾಟೆ ನಡೆದಿತ್ತು. ಶಾಸಕರ ಪುತ್ರ ಬಸವೇಶ್ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಬಸವೇಶ್ ನಾಪತ್ತೆಯಾಗಿದ್ದರು.

ಇದರ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ನಗರದಲ್ಲಿ ಪರ-ವಿರೋಧ ಪ್ರತಿಭಟನೆ ನಡೆಸಿದ್ದರು. ಶಾಸಕರಾದ ಸಂಗಮೇಶ್ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ವಿಷಯ ಕುರಿತು ಪ್ರಸ್ತಾಪಿಸಿದರು. ವಿಧಾನಸಭೆ ಅವೇಶನದಲ್ಲೂ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಧರಣಿ ನಡೆಸಿದ್ದರು. ಈ ವೇಳೆ ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿದರು ಎಂಬ ಕಾರಣಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಗಮೇಶ್ ಅವರನ್ನು ಒಂದು ವಾರ ಕಾಲ ಅಮಾನತ್ತುಗೊಳಿಸಿದ್ದರು.

ಕಾಂಗ್ರೆಸ್‍ನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿಧಾನಸಭೆಯಲ್ಲಿ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್‍ನ ಎಲ್ಲಾ ಶಾಸಕರು ಇದಕ್ಕೆ ಬೆಂಬಲ ನೀಡುತ್ತಿದ್ದಾರೆ. ಭದ್ರಾವತಿಯಲ್ಲಿನ ಗಲಭೆ ಪ್ರಕರಣವನ್ನು ಸಂಗಮೇಶ್ ನನ್ನ ಗಮನಕ್ಕೆ ತಂದಿದ್ದಾರೆ.

ಪ್ರಕರಣದಲ್ಲಿ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುತ್ತೇನೆ ಎಂದು ನಾನು ಭರವಸೆ ನೀಡಿದ್ದೇನೆ. ಆದರೂ ಸಂಗಮೇಶ್ ಸಭಾಧ್ಯಕ್ಷರ ಮುಂದಿನ ಬಾವಿಯಲ್ಲಿ ಧರಣಿ ನಡೆಸಿ ಶರ್ಟ್ ಬಿಚ್ಚಿದರೆ ಏನು ಮಾಡುವುದು ಎಂದು ಅಮಾನತು ಆದೇಶವನ್ನು ಸಮರ್ಥಿಸಿಕೊಂಡಿದ್ದಾರೆ.

ವಿಧಾನಸಭೆಯಲ್ಲಿ ಈ ಪ್ರಕರಣ ಕೋಲಾಹಲಕ್ಕೆ ಕಾರಣವಾಗಿತ್ತು. ದಾಖಲಾಗಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಭದ್ರಾವತಿ ಪೊಲೀಸರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯಲ್ಲಿ ಬಸವೇಶ್ ಅವರನ್ನು ಬಂಸಿ ಭದ್ರಾವತಿಗೆ ಕರೆ ತಂದಿದ್ದಾರೆ.

ಕಬಡ್ಡಿ ಪಂದ್ಯಾವಳಿಯ ನಡುವೆ ಜೈ ಶ್ರೀರಾಮï ಎಂದು ಘೋಷಣೆ ಕೂಗಿದ್ದಕ್ಕೆ ಶಾಸಕರ ಪುತ್ರ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದರು. ಆದರೆ ಘಟನೆ ರಾಜಕೀಯ ಪ್ರೇರಿತ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದೆ. ಇವರೊಬ್ಬರೇ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.

ಅದಕ್ಕಾಗಿ ಇವರನ್ನು ಹೆದರಿಸಲು ಸಂಗಮೇಶ್ ಕುಟುಂಬದ ಏಳು ಮಂದಿ ವಿರುದ್ಧ ಗಂಭೀರ ಸ್ವರೂಪದ ಪ್ರಕರಣ ದಾಖಲಿಸಲಾಗಿದೆ. ಕಾಂಗ್ರೆಸ್‍ನ 20 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈಗ ಬಸವೇಶ್ ಅವರ ಬಂಧನವಾಗಿರುವುದರಿಂದ ಕಾಂಗ್ರೆಸ್ ಶಾಸಕರನ್ನು ಮತ್ತಷ್ಟು ರೊಚ್ಚಿಗೆಬ್ಬಿಸಿದೆ. ಪ್ರಕರಣ ವಿಧಾನಸಭೆಯಲ್ಲಿ ಮತ್ತಷ್ಟು ಗಲಾಟೆಗೆ ಕಾರಣವಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ರಾಹುಲ್‌ ಗಾಂಧಿ ‘ಇಂಡಿಯಾ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಆಗಲಿ: ಸುರ್ಜೇವಾಲಾ

Spread the love ಬೆಳಗಾವಿ: ‘ರಾಹುಲ್‌ ಗಾಂಧಿ ಅವರೇ ಮುಂದಿನ ಪ್ರಧಾನಿ ಆಗಬೇಕು ಎಂಬ ನಿರೀಕ್ಷೆ ನಮಗಿದೆ’ ಎಂದು ಎಐಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ