ಬೆಂಗಳೂರು,ಮಾ.6- ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವಂತೆ ಕಣ್ಣಿನಲ್ಲಿ ನೋಡಲಾಗದ ಸಿಡಿ ಇವೆಯಂತೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಲೇವಡಿ ಮಾಡಿದೆ.
ಪ್ರಮುಖ ಸಾಮಾಜಿಕ ಜಾಲತಾಣವಾದ ಟ್ವಿಟರ್‍ನಲ್ಲಿ ಕಾಂಗ್ರೆಸ್ ಬಿಜೆಪಿಯ ವಿರುದ್ಧ ಹರಿಹಾಯ್ದಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಸಿಡಿ ಶಬ್ಧ ಕೇಳಿದರೆ ಇಡೀ ಸಂಪುಟವೇ ಏಕೆ ಬೆಚ್ಚಿಬೀಳುತ್ತಿದೆ ? ಆರು ಸಚಿವರು ಸುದ್ದಿ ಪ್ರಸಾರಕ್ಕೆ ಮುಂಜಾಗ್ರತೆಯಾಗಿ ತಡೆ ತರುತ್ತಿದ್ದಾರೆ ಏಕೆ ಎಂದು ಪ್ರಶ್ನಿಸಿದೆ.ಸರ್ಕಾರದ ರಚನೆಯಿಂದ ಹಿಡಿದು ಸಂಪುಟ ವಿಸ್ತರಣೆಯವರೆಗೂ ಬೃಹತ್ ಹಗರಣ ಅಡಗಿದೆ. ಆಪರೇಷನ್ ಕಮಲ ಎನ್ನುವುದು ಬಿಜೆಪಿಯ ರಾಜಕೀಯ ವ್ಯಬಿಚಾರ. ಈ ಸರ್ಕಾರ ಮೇಲ್ನೋಟಕ್ಕೆ ಕಾಣುವಷ್ಟು ಸುಲಭದಲ್ಲಿ ರಚನೆಯಾಗಿರುವುದಲ್ಲ.
ಭೂಗತಲೋಕ, ಬೆದರಿಕೆ, ಹನಿಟ್ರ್ಯಾಪ್, ಬ್ಲಾಕ್‍ಮೇಲ್, ಸಾವಿರಾರು ಕೋಟಿ ಹಗರಣ, ಹೆಣ್ಣು, ಹೆಂಡ ಎಲ್ಲವನ್ನೂ ಉಪಯೋಗಿಸಿರುವುದು ದೃಢವಾಗುತ್ತಿದೆ. ಅಕಾರಕ್ಕಾಗಿ ಬಿಜೆಪಿ ಯಾವ ಮಟ್ಟಕ್ಕೂ ಇಳಿಯಬಲ್ಲದು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Laxmi News 24×7