ವಿಜಯಪುರ: ನಿನ್ನೆ ರಾತ್ರಿಯಷ್ಟೇ ಪತ್ನಿಯನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಕೊಂದಿದ್ದು, ಅಂಥದ್ದೇ ಮತ್ತೊಂದು ಘಟನೆ ಇಂದೂ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಗುಡ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮ ಕುಂಬಾರ (50) ಕೊಲೆಗೀಡಾದ ಮಹಿಳೆ. ಪತಿ ಕಲ್ಲಪ್ಪ ಕುಂಬಾರ ಕೊಲೆ ಆರೋಪಿ. ಪಾನಮತ್ತನಾಗಿ ಮನೆಗೆ ಬಂದ ಪತಿ, ಮತ್ತು ಮನೆಯಲ್ಲಿದ್ದ ಪತ್ನಿ ನಡುವೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ನಡೆದಿದೆ. ಇದರಿಂದ ಸಿಟ್ಟಾದ ಪತಿ, ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಯತ್ತ ಕೊಡಲಿಯನ್ನು ಬೀಸಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಮುದ್ದೇಬಿಹಾಳ ಪೊಲೀಸರು, ಆರೋಪಿ ಕಲ್ಲಪ್ಪನನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Laxmi News 24×7