Breaking News

ಸಿಡಿಗೆ 15 ಕೋಟಿ ಖರ್ಚು; ಬಾಲಚಂದ್ರ ಜಾರಕಿಹೊಳಿ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕೊಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಕೇಸ್ ವಾಪಸ್ ಪಡೆಯಲು ಮುಂದಾದ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಮಾಧ್ಯಮದವರಿಗೆ ಒಂದು ವಿನಂತಿ ಮಾಡಿಕೊಳ್ಳುತ್ತೇನೆ ಸಿಡಿಯಲ್ಲಿರುವ ಮಹಿಳೆ ಸಂತ್ರಸ್ತ ಮಹಿಳೆ ಎಂದು ದಯವಿಟ್ಟು ಹೇಳಬೇಡಿ. ಯಾಕೆಂದರೆ ಇದರಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ. ಮಹಿಳೆಯ ಹಿಂದೆ ಇನ್ನೂ ಮೂರು ಜನರಿದ್ದಾರೆ. ಒಟ್ಟು 15 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂದರು.

ದೂರು ನೀಡುವ ಮುನ್ನವೇ ದೃಶ್ಯ ಯೂಟೂಬ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ರಮೇಶ್ ಜಾರಕಿಹೊಳಿ ದಯವಿಟ್ಟು ಮನೆಯಿಂದ ಹೊರಗೆ ಬಂದು ಸುದ್ದಿಗೋಷ್ಠಿ ನಡೆಸಿ ರಾಜ್ಯದ ಜನತೆಗೆ ಮಾಹಿತಿ ನೀಡಲಿ. ಸಿಡಿ ಪ್ರಕರಣದ ವಿರುದ್ಧ ದೂರು ನೀಡಲಿ ಎಂದು ಹೇಳಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ