Breaking News
Home / ರಾಜ್ಯ / ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚ. ಸಾಲಾಗಿ ಹಬ್ಬಗಳು,ಕೊರೊನಾ ಸಂದರ್ಭದಲ್ಲಿ ಹೊಸ ಸವಾಲು ಎದುರಾಗಲಿದೆ.

ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚ. ಸಾಲಾಗಿ ಹಬ್ಬಗಳು,ಕೊರೊನಾ ಸಂದರ್ಭದಲ್ಲಿ ಹೊಸ ಸವಾಲು ಎದುರಾಗಲಿದೆ.

Spread the love

ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಒಂದು ವಾರಗಳ ಕಾಲ ಘೋಷಣೆ ಮಾಡಿದ್ದ ಲಾಕ್‍ಡೌನ್ ಇಂದು ಮುಗಿಯಲಿದೆ. ಇದೀಗ ಸಿಲಿಕಾನ್ ಸಿಟಿಗೆ ಕೊರೊನಾ ಸಂದರ್ಭದಲ್ಲಿ ಹೊಸ ಸವಾಲು ಎದುರಾಗಲಿದೆ.

ಶ್ರಾವಣ ಮಾಸ ಆರಂಭದ ಬೆನ್ನಲ್ಲೆ ಹಬ್ಬಗಳ ಸೀಸನ್ ಆರಂಭವಾಗಲಿದೆ. ಈ ಹಬ್ಬಗಳ ಸೀಸನ್ ಬೆಂಗಳೂರಿಗೆ ಟೆನ್ಶನ್ ಆಗಿದೆ. ಈ ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಸಾಲಾಗಿ ಹಬ್ಬಗಳು ಶುರುವಾಗುತ್ತವೆ. ಇದರಿಂದ ಜನರ ವಲಸೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಮೂಲಕ ಒಂದು ವಾರದ ಲಾಕ್‍ಡೌನ್ ತೆರವಿನ ಬಳಿಕ ಹೊಸ ಚಾಲೆಂಜ್ ಎದುರಾಗಲಿದೆ.

ಹಬ್ಬಗಳ ಸಮಯದಲ್ಲಿ ಬೆಂಗಳೂರಿನಿಂದ ಅನೇಕರು ತಮ್ಮ ತಮ್ಮ ಊರಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಳವಾಗುತ್ತೆ. ಹೀಗಾಗಿ ಬೆಂಗಳೂರಿನಿಂದ ವೈರಸ್ ಹಳ್ಳಿಗಳ ಭಾಗಕ್ಕೆ ಶಿಫ್ಟ್ ಆಗುವ ಸಾಧ್ಯತೆಯ ಬಗ್ಗೆ ಆತಂಕ ಶುರುವಾಗಿದೆ.

ಏಕಾಏಕಿ ಲಾಕ್‍ಡೌನ್ ತೆರವು ಇನ್ನೊಂದಿಷ್ಟು ಅವಾಂತರಕ್ಕೆ ಕಾರಣವಾಗಲಿದೆ. ಹಾಗಾಗಿ ಹಬ್ಬಗಳ ಸಮಯದಲ್ಲಿ ಆದಷ್ಟು ಬಿಗಿ ಕ್ರಮ ಅಗತ್ಯತೆಯ ಬಗ್ಗೆ ಸರ್ಕಾರಕ್ಕೆ ಅಧಿಕಾರಿಗಳು, ತಜ್ಞರು ಈಗಾಗಲೇ ಸಲಹೆ ನೀಡಿದ್ದಾರೆ.

ಈಗಾಗಲೇ ಅಂತರ್ ಜಿಲ್ಲೆ ಓಡಾಟದಿಂದ ದೊಡ್ಡ ಕಂಟಕ ಎದುರಾಗಿದೆ. ಹಾಗಾಗಿ ಮುಂದಿನ ಹೆಜ್ಜೆ ಇಡೋವಾಗ ಎಚ್ವರಿಕೆಯಿಂದ ಇಡಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಲಾಗುತ್ತದೆ. ಜೊತೆಗೆ ಬೆಂಗಳೂರಿನಿಂದ ನಿರ್ಗಮನ/ ಆಗಮನದ ಬಗ್ಗೆ ನಿಗಾ ವಹಿಸಲು ಸೂಚನೆ ನೀಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ