Breaking News
Home / ರಾಜ್ಯ / ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಂಚಾರಿ ಎಸ್ ಎಸ್ ಐ ಬಸವಯ್ಯ ಎಂಬುವವರ ಮೇಲೆ ಉತ್ತರ ಪ್ರದೇಶ ಮೂಲದ ಮಹಿಳೆ ಹಲ್ಲೆ ನಡೆಸಿದ್ದು, ಮಹಿಳೆ ಅಪೂರ್ವಿ ವಿರುದ್ಧ ದೂರು ದಾಖಲಾಗಿದೆ.

ಮೈಸೂರು ಬ್ಯಾಂಕ್ ಮಾರ್ಗವಾಗಿ ಆಗಮಿಸಿದ ಅಪೂರ್ವಿ, ಸಿಗ್ನಲ್ ಜಂಪ್ ಮಾಡಿ ಮುಂದೆ ಸಾಗಿದ್ದಾರೆ. ಅವರನ್ನು ತಡೆದು ನಿಲ್ಲಿಸಿದ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ಮಹಿಳೆ ಎಎಸ್ ಐ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಹಿಳೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ