Breaking News

ಧ್ರುವ ಸರ್ಜಾ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ

Spread the love

ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯ ಪೊಗರು ಸಿನಿಮಾದ ಸಕ್ಸಸ್ ನ ಸಂಭ್ರಮದಲ್ಲಿದ್ದಾರೆ. ಇತ್ತೀಚಿಗಷ್ಟೆ ಪೊಗರು ಸಿನಿಮಾ ರಿಲೀಸ್ ಆಗಿದ್ದು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು ಮೂರ್ನಾಲ್ಕು ವರ್ಷಗಳಿಂದ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಧ್ರುವ ಉದ್ದ ಕೂದಲು ಮತ್ತು ಗಡ್ಡ ಬಿಟ್ಟ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದರು.

ಚಿತ್ರೀಕರಣ ಮುಗಿಯುತ್ತಿದ್ದಂತೆ ಧ್ರುವ ಕೂದಲಿಗೆ ಕತ್ತರಿ ಹಾಕುವ ಮೂಲಕ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಧ್ರುವ ಮತ್ತೆ ಲುಕ್ ಬದಲಾಯಿಸಿಕೊಂಡು ಮತ್ತಷ್ಟು ಹ್ಯಾಂಡ್ ಸಮ್ ಆಗಿ ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

 

ಇತ್ತೀಚಿಗಷ್ಟೆ ಧ್ರುವ ಪತ್ನಿ ಪ್ರೇರಣಾ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದ ಧ್ರುವ ಸದ್ಯ ವಾಪಸ್ ಆಗಿದ್ದಾರೆ. ಬೆಂಗಳೂರಿಗೆ ಬರುತ್ತಿದ್ದಂತೆ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ಈ ಲುಕ್ ಮುಂದಿನ ಸಿನಿಮಾದ್ದು ಇರಬಹುದಾ ಎನ್ನುವುದು ಅಭಿಮಾನಿಗಳ ಕುತೂಹಲವಾಗಿದೆ.

ಹೂ ಗುಚ್ಚ ಹಿಡಿದಿರುವ ಧ್ರುವ ಸರ್ಜಾ ಫೋಟೋಗೆ ಹೆಣ್ಣು ಮಕ್ಕಳು ಫಿದಾ ಆಗಿದ್ದಾರೆ. ಇನ್ನು ಇತ್ತೀಚಿಗೆ ಧ್ರುವ ಆಂಜನೇಯ ದೇವಸ್ಥಾನದ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮದ ಫೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಂದಹಾಗೆ ಆಕ್ಷನ್ ಪ್ರಿನ್ಸ್ ಇತ್ತೀಚಿಗೆ ಪತ್ನಿ ಪ್ರೇರಣಾ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದ ಫೋಟೋಗಳು ವೈರಲ್ ಆಗಿತ್ತು. ಗೋವಾ ಕಡಲ ತೀರದಲ್ಲಿ ಪತ್ನಿ ಜೊತೆ ರೊಮ್ಯಾಂಟಿಕ್ ಮೂಡ್ ನಲ್ಲಿದ್ದ ಧ್ರುವ ಸರ್ಜಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಪೊಗರು, ಧ್ರುವ ಸರ್ಜಾ ಅಭಿನಯದ 4ನೇ ಸಿನಿಮಾ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿರುವ ಧ್ರುವ ಪೊಗರು ಬಳಿಕ ದುಬಾರಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಪೂಜೆಯಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.


Spread the love

About Laxminews 24x7

Check Also

ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

Spread the loveಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ