Breaking News

ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿದ ನಟಿ ಪ್ರಿಯಾಂಕಾ ಚೋಪ್ರಾ

Spread the love

ನ್ಯೂಯಾರ್ಕ್ : ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅದರ ಲಾಂಚ್ ಕಾರ್ಯಕ್ರಮ ನೆರವೇರಿಸಿದ್ದಾರೆ.

ಮಾರ್ಚ್ ತಿಂಗಳ ಕೊನೆಯಲ್ಲಿ ರೆಸ್ಟೋರೆಂಟ್ ಸೋನಾ ತೆರೆಯುತ್ತಿದೆ ಎಂದು ಸೋನಾ ರೆಸ್ಟೋರೆಂಟ್ ಉದ್ಘಾಟನೆ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೋಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ ತಮ್ಮ ರೆಸ್ಟೋರೆಂಟ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟಿ, ರೆಸ್ಟೋರೆಂಟ್ ಗೆ ಸೋನಾ ಎಂದು ಹೆಸರಿಡಲಾಗಿದ್ದು, ನಮ್ಮ ಹೊಸ ರೆಸ್ಟೋರೆಂಟ್ ಸೋನಾವನ್ನು ನಿಮ್ಮ ಮುಂದಿಡಲು ನಾನಗೆ ಖುಷಿಯಾಗುತ್ತಿದೆ. ಇಲ್ಲಿ ಭಾರತೀಯ ಆಹಾರಗಳು ಸಿಗುತ್ತವೆ. ಹರಿನಾಯಕ್ ಅಡುಗೆ ಮಾಡಲಿದ್ದು, ಅತ್ಯಂತ ರುಚಿಕರವಾದ ಮತ್ತು ಹೊಸತನವಿರುವ ಮೆನುವನ್ನು ರಚಿಸಿದ್ದಾರೆ. ನನ್ನ ದೇಶದ ಫುಡ್ ಜರ್ನಿಗೆ ನಿಮ್ಮನ್ನು ಕರೆದೊಯ್ಯುತ್ತಾರೆ ಎಂದು ಬರೆದಿದ್ದಾರೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ