ನವದೆಹಲಿ: ಇಂದು ವಿಶ್ವಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳಾ ದಿನಾಚರಣೆ ಶುಭ ಕೋರಿದರು.
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ ದೇಶದ ಮಹಿಳೆಯರಿಗೆ ಶುಭಕೋರಿ ಮಹಿಳಾ ಶಕ್ತಿಗೆ ಸಲ್ಯೂಟ್ ಮಾಡುವೆ ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮ ರಾಷ್ಟ್ರದ ಮಹಿಳೆಯರ ಅನೇಕ ಸಾಧನೆಗಳನ್ನು ಮಾಡಿದ್ದು, ಭಾರತ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದು, ಎಲ್ಲಾ ವಿಭಾಗಗಳಲ್ಲಿ ಮಹಿಳೆಯರು ಹೆಚ್ಚು ಅವಕಾಶಗಳನ್ನು ಪಡೆಯುತ್ತಿರುವುದು ನಮ್ಮ ಸರ್ಕಾರದ ಗೌರವ ಎಂದು ಪಿಎಂ ಹೇಳಿದ್ದಾರೆ.
Laxmi News 24×7