Breaking News

Karnataka Budget 2021| ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ

Spread the love

ಬೆಂಗಳೂರು: ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

2021-22ನೇ ಸಾಲಿನ ಅಯವ್ಯಯವನ್ನು ಸೋಮವಾರ ಮಂಡಿಸಿದ ಮುಖ್ಯಮಂತ್ರಿ ಈ ವಿಚಾರ ಘೋಷಣೆ ಮಾಡಿದರು.

‘ಲಿಂಗಾಯತ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಣೆ ಮಾಡಿ ₹500 ಅನುದಾನವನ್ನೂ ನಿಗದಿ ಮಾಡಲಾಗಿದೆ. ಅದರಂತೆಯೇ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಲಾಗುತ್ತಿದೆ. ಅದಕ್ಕಾಗಿ ₹500 ಕೋಟಿ ನೀಡಲಾಗುತ್ತಿದೆ,’ ಎಂದು ಘೋಷಿಸಿದರು.

ಮುಖ್ಯಮಂತ್ರಿ ಈ ಘೋಷಣೆ ಮಾಡುತ್ತಲೇ ವಿಧಾನಸಭೆ ಸದಸ್ಯರು ಮೇಜು ತಟ್ಟಿ ಸ್ವಾಗತಿಸಿದರು.

ಇದೇ ವೇಳೆ ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ ₹1500 ಕೋಟಿ ನೀಡುವುದಾಗಿಯೂ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ