Breaking News

ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

Spread the love

ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸರು ಹಾಗೂ ಕುಟುಂಬಸ್ಥರು ಭಾನುವಾರ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದರೂ ಬಾಲಕರು ಪತ್ತೆಯಾಗಿರಲಿಲ್ಲ. 9 ವರ್ಷದ ವರುಣ್, 5 ವರ್ಷದ ಸಣ್ಣಯ್ಯ ಸಾವನ್ನಪ್ಪಿರುವ ಬಾಲಕರು.

ಹಂಪಯ್ಯ ನಾಯಕ್ ಕೊನೆಯ ಪುತ್ರ ಶಿವಾನಂದ ಮಕ್ಕಳಾದ ವರುಣ್ ಹಾಗೂ ಸಣ್ಣಯ್ಯ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಿಂದ ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ನಾಪತ್ತೆಯಾಗಿದ್ದರು. ಮನೆಯ ಹೊರಗಡೆ ಆಟವಾಡುತ್ತಿದ್ದ ಬಾಲಕರು ಏಕಾಏಕಿ ನಾಪತ್ತೆಯಾಗಿದ್ದರು. ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದರು.
ಮಕ್ಕಳು ಹಳ್ಳದಲ್ಲಿ ಸ್ನಾನ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ನಾಪತ್ತೆಯಾದ ಬಾಲಕರಿಗಾಗಿ ನಿನ್ನೆಯಿಂದ ಪೊಲೀಸರು ಎಲ್ಲೆಡೆ ಹುಡುಕಾಟ ನಡೆಸಿದ್ದರು.

ಸಿರವಾರ ಹಾಗೂ ಕವಿತಾಳ ಠಾಣೆ ಪೊಲೀಸರಿಂದ ಬಾಲಕರಿಗಾಗಿ ಹುಡುಕಾಟ ನಡೆದಿತ್ತು. ಗ್ರಾಮದ ಹಳ್ಳದಲ್ಲೇ ಇಂದು ಬೆಳಗ್ಗೆ ಶವಗಳು ಪತ್ತೆಯಾಗಿವೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ