Breaking News

KGF 2′ ಡಬ್ಬಿಂಗ್ ಶುರು ಮಾಡಿದ ನಟಿ ಶ್ರೀನಿಧಿ ಶೆಟ್ಟಿ

Spread the love

ಇಡೀ ದೇಶವೆ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರು ಸದ್ಯ ತೆಲುಗು ಸಿನಿಮಾದಲ್ಲಿ ನಿರತರಾಗಿದ್ದಾರೆ. ಜೊತೆಗೆ ಕೆಜಿಎಫ್2 ನಲ್ಲೂ ಬ್ಯುಸಿಯಾಗಿದ್ದಾರೆ.

ಕೆಜಿಎಫ್-2 ಚಿತ್ರದ ಕೆಲಗಳು ಸರಾಗವಾಗಿ ಸಾಗುತ್ತಿದೆ. ಸದ್ಯ ಸಿನಿಮಾದ ಡಬ್ಬಿಂಗ್ ಕೆಲಗಳು ಪ್ರಾರಂಭವಾಗಿದೆ. ಈಗಾಗಲೇ ನಟಿ ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ನಲ್ಲಿ ಭಾಗಿಯಾಗಿದ್ದು, ತನ್ನ ಪಾತ್ರಕ್ಕೆ ಧ್ವನಿ ನೀಡುತ್ತಿದ್ದಾರೆ. ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೆಜಿಎಫ್-2 ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಿದೆ. ಸದ್ಯ ಸಿನಿಮಾತಂಡ ಅದ್ದೂರಿಯಾದ ಪ್ರಿ ರಿಲೀಸ್ ಕಾರ್ಯಕ್ರಮ ಮಾಡಲು ನಿರ್ಧರಿಸಿದೆ. ಸಿನಿಮಾ ರಿಲೀಸ್ ಗೆ ಇನ್ನು ಮೂರ್ನಾಲ್ಕು ತಿಂಗಳು ಇರುವಾಗಲೇ ಪ್ರಿ ರಿಲೀಸ್ ಕಾರ್ಯಕ್ರಮ ಮಾಡಲು ಸಿನಿಮಾತಂಡ ಈಗಿನಿಂದಲೇ ಪ್ಲಾನ್ ಮಾಡುತ್ತಿದೆ.

ಕೆಜಿಎಫ್-2 ತೆಲುಗು ಪ್ರಿ ರಿಲೀಸ್ ಕಾರ್ಯಕ್ರಮಕ್ಕೆ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಬರಲಿದ್ದಾರೆ ಎನ್ನಲಾಗುತ್ತಿದೆ. ಪ್ರಭಾಸ್ ಮತ್ತು ಜೂ ಎನ್ ಟಿ ಆರ್ ಇಬ್ಬರು ವಿಶೇಷ ಗೆಸ್ಟ್ ಆಗಿ ಆಹ್ವಾನ ಮಾಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಇನ್ನು ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾ ಜುಲೈ 16ಕ್ಕೆ ತೆರೆಗೆ ಬರುತ್ತಿದೆ. ಚಿತ್ರದಲ್ಲಿ ಬಾಲಿವುಡ್ ನ ಸಂಜಯ್ ದತ್, ರವೀನಾ ಟಂಡನ್ ಮತ್ತು ನಟ ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ