Breaking News

ಶಾಕಿಂಗ್: ಪೋಷಕರ ಮಗ್ಗುಲಲ್ಲಿ ಮಲಗಿದ್ದ ಮಗುವನ್ನೇ ಕಚ್ಚಿ ಎಳೆದೊಯ್ದ ನಾಯಿ

Spread the love

ಹಾವೇರಿ: ಹಾವೇರಿ ಜಿಲ್ಲೆ ಗುತ್ತಲ ಸಮೀಪದ ಹೊಸರಿತ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪೋಷಕರ ಮಡಿಲಲ್ಲಿದ್ದ 10 ತಿಂಗಳ ಮಗುವನ್ನು ಬೀದಿ ನಾಯಿ ಕಚ್ಚಿಕೊಂಡು ಹೋಗಿದೆ.

ಗಾಯಗೊಂಡ ಮಗುವನ್ನು ರಕ್ಷಿಸಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ಸೇರಿಸಲಾಗಿದೆ. ಅಲೆಮಾರಿ ಸಮುದಾಯದ ದಂಪತಿಯ ಮಗು ಭಾನುವಾರ ರಾತ್ರಿ ಪೋಷಕರ ಜೊತೆ ಮಲಗಿದ್ದ ವೇಳೆಯಲ್ಲಿ ನಾಯಿ ಕಚ್ಚಿಕೊಂಡು ಹೋಗಿದೆ. ಈ ವೇಳೆ ಎಚ್ಚರಗೊಂಡ ದಂಪತಿ ಮಗುವನ್ನು ರಕ್ಷಿಸಿದ್ದಾರೆ.

ಮಗುವಿನ ಮುಖ, ಸೇರಿದಂತೆ ದೇಹದ ಭಾಗಗಳನ್ನು ನಾಯಿ ಕಚ್ಚಿದೆ. ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಎಮ್ಮೆ ಕರುವನ್ನು ಕೊಂದು ಹಾಕಿವೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ