Breaking News

ಸಿ.ಡಿ ಪ್ರಕರಣ ಎಲ್ಲ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.: ಬಸವರಾಜ್ ಬೊಮ್ಮಾಯಿ

Spread the love

ಬೆಂಗಳೂರು,ಮಾ.9- ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಸಿ.ಡಿ ಪ್ರಕರಣದ ಕುರಿತಾಗಿ  ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಡಿ ವಿವಾದ ಬೆಳಕಿಗೆ ಬಂದ ನಂತರ ಎಲ್ಲ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವುದು ನಮ್ಮ ಉದ್ದೇಶ ಎಂದರು.

ಇದರಲ್ಲಿ 2+3+4 ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ನನಗೆ ಯಾವ ಮಾಹಿತಿ ಇಲ್ಲ. ಜಾರಕಿಹೊಳಿ ಕುಟುಂಬದವರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರಬಹುದು. ಆದರೆ ನನಗೆ ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಯಾವ ಕಾರಣಕ್ಕೆ ತಾವು ನೀಡಿದ್ದ ದೂರನ್ನು ಹಿಂಪಡೆದಿದ್ದಾರೆ ಗೊತ್ತಿಲ್ಲ. ಪೊಲೀಸರು ಅದನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎಂಬುದರ ಬಗ್ಗೆಯೂ ನಾನು ಮಾಹಿತಿಯನ್ನು ಪಡೆದುಕೊಂಡಿಲ್ಲ ಎಂದು ಹೇಳಿದರು.

ಯಾವುದೇ ವಿಷಯದ ಬಗ್ಗೆಯೂ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಚರ್ಚೆ ಮಾಡಲಿ. ಸರ್ಕಾರ ಉತ್ತರ ಕೊಡಲು ಸಿದ್ದವಿದೆ. ಕಲಾಪವನ್ನು ಬಹಿಷ್ಕರಿಸುವುದು, ಸದನದಿಂದ ಹೊರಹೋಗುವುದು ಸರಿಯಲ್ಲ. ಏನೇ ಇದ್ದರೂ ಕೂಡ ಚರ್ಚೆಗೆ ಬನ್ನಿ ಎಂದು ಬೊಮ್ಮಾಯಿ ಮನವಿ ಮಾಡಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ