Breaking News

ರಮೇಶ್ ಜಾರಕಿಹೊಳಿ ಸಿಡಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಚಿವ ಸೋಮಶೇಖರ್

Spread the love

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ನೇರವಾಗಿ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ ಸಿಡಿ ಮಾಡಿದ್ದು ಕಾಂಗ್ರೆಸ್ ನವರೇ. ನಾನೂ ಕೂಡ ಕಾಂಗ್ರೆಸ್ ನಲ್ಲಿ 20 ವರ್ಷಗಳ ಕಾಲ ಇದ್ದೆ. ಹಾಗಾಗಿ ಕಾಂಗ್ರೆಸ್ ನವರು ಏನೆಲ್ಲಾ ಮಾಡುತ್ತಾರೆ ಎಂಬುದು ನನಗೂ ಗೊತ್ತು. ಇಂಥ ಮನೆ ಹಾಳ ಕೆಲಸ ಮಾಡುವುದು ಅವರೇ ಎಂದು ಹೇಳಿದ್ದಾರೆ.

ಸಿಡಿ ಕೇಸ್ ನ್ನು ಮೊದಲು ಸಿಬಿಐ ತನಿಖೆಗೆ ಒಪ್ಪಿಸಲಿ. ಸತ್ಯಾಸತ್ಯತೆ ಹೊರಬರಲಿ ಎಂಬುದು ನಮ್ಮೆಲ್ಲರ ಒತ್ತಾಯ. ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ತಾಕತ್ತಿದ್ದರೆ ರಮೇಶ್ ಜಾರಕಿಹೊಳಿ ವಿರುದ್ಧ ಅಥವಾ ನನ್ನ ವಿರುದ್ಧ ಸ್ಪರ್ಧಿಸಲಿ. ಅದನ್ನು ಬಿಟ್ಟು ಈ ರೀತಿ ನಕಲಿ ಸಿಡಿ ಮಾಡಿ ತೇಜೋವಧೆ ಮಾಡುವ ಕೆಲಸ ಸರಿಯಲ್ಲ ಎಂದು ಗುಡುಗಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ