Breaking News

ರಾಧಿಕಾ ಪಂಡಿತ್ ಬರ್ತಡೇ: ಮೊಹಮ್ಮದ್ ನಲಪಾಡ್ ಸೇರಿ ಸ್ನೇಹಿತರು ಭಾಗಿ

Spread the love

ಸ್ಯಾಂಡಲ್ ವುಡ್ ಪ್ರಿನ್ಸಸ್ ರಾಧಿಕಾ ಪಂಡಿತ್ ಇತ್ತೀಚಿಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಕೊರೊನಾ ವೈರಸ್ ಹಿನ್ನೆಲೆ ಈ ವರ್ಷ ಅಭಿಮಾನಿಗಳ ಜೊತೆ ಜನುಮದಿನ ಸಂಭ್ರಮಿಸಲು ಸಾಧ್ಯವಾಗಿಲ್ಲ. ನೆಚ್ಚಿನ ನಟಿಯ ಹುಟ್ಟುಹಬ್ಬದ ಕ್ಷಣದಲ್ಲಿ ಭಾಗಿಯಾಗಿಲ್ಲ ಎಂಬ ಕಾರಣಕ್ಕೆ ಅಭಿಮಾನಿಗಳು ನಿರಾಸೆಯಾಗಿದ್ದರು.

ಇದೀಗ, ರಾಧಿಕಾ ಪಂಡಿತ್ ಬರ್ತಡೇ ಸೆಲೆಬ್ರೆಷನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸೇರಿದಂತೆ ಸ್ನೇಹಿತರು ರಾಧಿಕಾ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಪತ್ನಿಯ ಜನುಮದಿನದ ಸಂಭ್ರಮ ಎಲ್ಲಿ ಮತ್ತು ಯಾವಾಗ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಯಶ್, ರಾಧಿಕಾ ಪಂಡಿತ್ ಹಾಗೂ ಇಬ್ಬರು ಮಕ್ಕಳು (ಐರಾ-ಯಥರ್ವ್ ಯಶ್) ಒಟ್ಟಿಗೆ ಇರುವ ಫೋಟೋ ಆಕರ್ಷಿಸುತ್ತಿದೆ.

ಅಂದ್ಹಾಗೆ, ಈ ವರ್ಷ ನನ್ನ ಬರ್ತಡೇ ಕಾರಣದಿಂದ ಯಾರೂ ಮನೆ ಬಳಿ ಬರಬೇಡಿ ಎಂದು ಬರ್ತಡೇಗೂ ಮುಂಚೆ ರಾಧಿಕಾ ಪಂಡಿತ್ ಮನವಿ ಮಾಡಿದ್ದರು.

‘ಪ್ರತಿ ವರ್ಷ ಬೇರೆ ಜಾಗಗಳಿಂದ ಬೇರೆ ಊರಿನಿಂದ ನನ್ನ ಹುಟ್ಟಿದ ಹಬ್ಬ ಆಚರಣೆ ಮಾಡಲು ಭೇಟಿ ಮಾಡಲು ಬರುತ್ತಿದ್ದಿರಿ. ಕಳೆದ ಎರಡು ವರ್ಷಗಳಿಂದ ಇದು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲೆಡೆ ಇರುವುದರಿಂದ ನಮ್ಮ ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ನಿಮ್ಮನ್ನ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲವೆಂದು ತುಂಬಾ ಕಾಡುತ್ತಿದೆ. ಈ ಬಾರಿ ಯಾವುದೇ ಆಚರಣೆ ಮನೆಯ ಬಳಿ ಇರುವುದಿಲ್ಲ. ದಯವಿಟ್ಟು ಯಾರು ಬೇಜಾರಾಗಬೇಡಿ. ಆದರೂ ನಿಮ್ಮ ಎಲ್ಲಾ ಸೋಷಿಯಲ್ ಮೀಡಿಯಾ ಮೆಸೇಜ್ ನೋಡುತ್ತೇನೆ, ಸಾಧ್ಯವಾದಷ್ಟು ರಿಪ್ಲೈ ಕೊಡುತ್ತೇನೆ. ಎಲ್ಲರ ಪ್ರೀತಿಗೂ ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ನಿಮ್ಮ ರಾಧಿಕಾ ಪಂಡಿತ್’ ಎಂದು ಹೇಳಿದ್ದಾರೆ.

ರಾಧಿಕಾ ಪಂಡಿತ್ ಅವರ ಈ ಮನವಿ ಅಭಿಮಾನಿಗಳಿಗೆ ನಿರಾಸೆ ತರಿಸಿತ್ತು. ನೆಚ್ಚಿನ ನಟಿಯನ್ನು ಭೇಟಿ ಮಾಡುವ ಅವಕಾಶ ಸಿಗುತ್ತದೆ ಎಂದು ಕಾಯುತ್ತಿದ್ದವರಿಗೆ ಸಿಂಡ್ರೆಲಾ ಬೇಸರ ಮೂಡಿಸಿದ್ದರು.


Spread the love

About Laxminews 24x7

Check Also

ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ.

Spread the loveಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ. ಸರ್ಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ