Breaking News
Home / ಜಿಲ್ಲೆ / ಬೆಳಗಾವಿ / ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ

Spread the love

ಬೆಳಗಾವಿ–  ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ನೀಡಲಾಗಿದೆ.
ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯಂತೆ 2010 ರಿಂದ 2019 ರವರೆಗೆ ವಿವಿಧ ಪದವಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ, ಪರೀಕ್ಷೆಗಳಿಗೆ ಹಾಜರಾಗಲು ಅವಕಾಶವಿಲ್ಲದ ಹಾಗೂ ಪದವಿ ಪೂರ್ಣಗೊಳಿಸದ ಸ್ನಾತಕ (ಬಿ.ಎ., ಬಿ.ಎಸ್.ಸಿ., ಬಿ.ಎಸ್.ಸಿ.(ಸಿ.ಎಸ್), ಬಿ.ಕಾಂ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಡ್., ಬಿ.ಪಿ.ಎಡ್.) ಪದವಿಯ ಹಾಗೂ ಸ್ನಾತಕೋತ್ತರ (ಎಂ.ಎ., ಎಂಎಸ್ ಸಿ, ಎಂಕಾಂ, ಎಂ.ಎಸ್.ಡಬ್ಲ್ಯು, ಎಂಬಿಎ, ಎಂಸಿಎ, ಎಂಎಲ್ಐಸಿ) ಪದವಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಸುವರ್ಣ ಅವಕಾಶವನ್ನು (Golden Chance) ಒಂದು ಬಾರಿ ಮಾತ್ರ (One Time measure) ಕಲ್ಪಿಸಿ ಪರೀಕ್ಷೆಯನ್ನು ನಡೆಸಲು ಮತ್ತು ಪ್ರಸ್ತುತ ಪರೀಕ್ಷೆಗಳನ್ನು ಮೇ/ಜೂನ-2021 ರಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆದುದರಿಂದ ಆಯಾ ವಿಭಾಗಗಳ/ಸಂಯೋಜಿತ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿಗಳನ್ನು Online ಮೂಲಕ ನಿಗದಿತ ಸಮಯದಲ್ಲಿ ಶುಲ್ಕದೊಂದಿಗೆ ಭರಿಸಲು ಸೂಚಿಸಲಾಗಿದೆ.
ಈ ಪರೀಕ್ಷೆಗಳಿಗೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ (Web Site: WWW.rcub.ac.in) ನಿಂದ ಪಡೆಯಬಹುದು. ಪರೀಕ್ಷೆಯ ದಿನಾಂಕ, ಪರೀಕ್ಷಾ ಕೇಂದ್ರಗಳು ಇತ್ಯಾದಿ ವಿವರಗಳನ್ನು ನಂತರ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ತಮ್ಮ ವಿಭಾಗಗದ ಮುಖ್ಯಸ್ಥರಿಗೆ/ಮಹಾವಿದ್ಯಾಲಯಗಳ ಪ್ರಾಂಶುಪಾಲರನ್ನು ಸಂಪರ್ಕಿಸಲು ಹಾಗೂ ಈ ಅವಕಾಶವನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಪ್ರೊ. ಎಸ್. ಎಮ್. ಹುರಕಡ್ಲಿ, ಕುಲಸಚಿವರು ಮೌಲ್ಯಮಾಪನ ಇವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ