Breaking News
Home / Uncategorized / ಸಾರಿಗೆ ನೌಕರರಿಗೆ ಶಿವರಾತ್ರಿ ಸಂಭ್ರಮ! ಅಂತರ್‌ ನಿಗಮಗಳ ವರ್ಗಾವಣೆಗೆ ಅಸ್ತು

ಸಾರಿಗೆ ನೌಕರರಿಗೆ ಶಿವರಾತ್ರಿ ಸಂಭ್ರಮ! ಅಂತರ್‌ ನಿಗಮಗಳ ವರ್ಗಾವಣೆಗೆ ಅಸ್ತು

Spread the love

ಬೆಂಗಳೂರು: ಶಿವರಾತ್ರಿ ಸಂದರ್ಭದಲ್ಲೇ ರಾಜ್ಯ ಸಾರಿಗೆ ನೌಕರರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ಅಂತರ್‌ ನಿಗಮಗಳ ವರ್ಗಾವಣೆಗೆ ಸರಕಾರ ಬುಧವಾರ ಆದೇಶಿಸಿದ್ದು, ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರಿಂದ ಸುಮಾರು 20-25 ಸಾವಿರ ನೌಕರರಿಗೆ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ.

ಮಾತೃಸಂಸ್ಥೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ವೃಂದದ ಖಾಯಂ ನೌಕರರಿಗೆ ನಿಬಂಧನೆಗಳಿಗೆ ಒಳಪಟ್ಟ ಅಂತರ್‌ ನಿಗಮಗಳ ವರ್ಗಾವಣೆ ಭಾಗ್ಯ ಕಲ್ಪಿಸಲಾಗಿದೆ. ಇನ್ನು ಮುಂದೆ ಪ್ರತೀ ವರ್ಷ ಎ.1ರಿಂದ 30ರ ವರೆಗೆ ಈ ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ವರ್ಷದಲ್ಲಿ ಒಟ್ಟು ಸಿಬಂದಿ ಪ್ರಮಾಣದ ಶೇ. 2ರಷ್ಟು ಮಂದಿಯ ವರ್ಗಾವಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಡಿಸೆಂಬರ್‌ನಲ್ಲಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು, 6ನೇ ವೇತನ ಪರಿಗಣನೆ ಸಹಿತ ಒಂಬತ್ತು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದರು. ಈ ಪೈಕಿ ಏಳು ಈಡೇರಿದಂತಾಗಿದೆ. 6ನೇ ವೇತನ ಆಯೋಗದ ಶಿಫಾರಸು ಅನ್ವಯಿಸುವುದು ಮತ್ತು ತರಬೇತಿ ಅವಧಿ ಇಳಿಕೆ ಬಾಕಿ ಇವೆ.


Spread the love

About Laxminews 24x7

Check Also

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ!

Spread the loveವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ! ಬೆಂಗಳೂರು: ಹಾಸನದ ಹಾಲಿ ಸಂಸದ, ಮಾಜಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ