Breaking News

ಶಿವಸೇನೆಯಿಂದ ಅಂಗಡಿ ಮಾಲೀಕರಿಗೆ ಬೆದರಿಕೆ

Spread the love

ಬೆಳಗಾವಿ: ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ ಮುಂದುವರೆದಿದ್ದರೆ ಇದೀಗ ಕೊಲ್ಲಾಪುರದಲ್ಲಿಯೂ ಮಳಿಗೆಗಳಿಗೆ ಕನ್ನಡದಲ್ಲಿರುವ ಬೋರ್ಡ್ ಗಳ ಮೇಲೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದೆ.

ಶಿವಸೇನೆ ಕಾರ್ಯಕರ್ತರು ಕೊಲ್ಲಾಪುರದ ಮಳಿಗೆಗಳ ಮೇಲಿರುವ ಕನ್ನಡ ಬೋರ್ಡ್ ಗಳಿಗೆ ಕಪ್ಪು ಮಸಿ ಬಳಿಯುವ ಕೆಲಸ ಮಾಡುತ್ತಿದ್ದು, ಕನ್ನಡ ಬೋರ್ಡ್ ಹಾಕಿದರೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಅಂಗಡಿ ಹಾಗೂ ಮಳಿಗೆಗಳ ಮಾಲೀಕರಿಗೆ ಶಿವಸೇನೆ ಮುಖಂಡ ಸಂಜಯ್ ಪವಾರ್ ಬೆದರಿಕೆ ಹಾಕುತ್ತಿದ್ದಾರೆ.

ಇನ್ನು ಇಲ್ಲಿನ ಮಹಾಲಕ್ಷ್ಮಿ ದೇವಾಲಯದ ಬಳಿ ಇರುವ ಹಲವಾರು ಅಂಗಡಿಗಳಲ್ಲಿ ಕನ್ನಡದಲ್ಲಿ ಬೋರ್ಡ್ ಹಾಕಲಾಗಿದ್ದು, ಇಲ್ಲೂ ಕೂಡ ಶಿವಸೇನೆ ಕಾರ್ಯಕರ್ತರು ಪುಂಡಾಟ ಮೆರೆದಿದ್ದಾರೆ. ಶಿವಸೇನೆ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ