Breaking News
Home / ಜಿಲ್ಲೆ / ಬೆಂಗಳೂರು / ಕಿತ್ತೂರು ಚನ್ನಮ್ಮನ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ: ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ

ಕಿತ್ತೂರು ಚನ್ನಮ್ಮನ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ: ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ

Spread the love

ಬೆಳಗಾವಿ  : ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.೧೨) ಬೆಳಿಗ್ಗೆ ೧೦ ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.
ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ ೭೫ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಲಿದ್ದಾರೆ.

ರಾಜ್ಯದ ಬೆಳಗಾವಿ ಜಿಲ್ಲೆಯ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಸಮಾರಂಭ ನಡೆಯಲಿದೆ. ಇದಾದ ಬಳಿಕ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ.
ಕಿತ್ತೂರು ಕೋಟೆ ಆವರಣದಲ್ಲಿ ನಡೆಯಲಿರುವ ವೇದಿಕೆ ಸಮಾರಮಂಭವನ್ನು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಉದ್ಘಾಟಿಸಲಿದ್ದಾರೆ.
ಕಿತ್ತೂರು ಕಲ್ಮಠ ರಾಜಗುರುಗಳಾದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಹಾಗೂ ನಿಚ್ಚನಕಿಯ ಮಡಿವಾಳೇಶ್ವರ ಮಠದ ಗುರುಗಳಾದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ, ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಿತ್ತೂರಿನ ಶಾಸಕರಾದ ಮಹಾಂತೇಶ ದೊಡಗೌಡ್ರ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಕರ್ನಾಟಕ ವಿಧಾನ ಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ ಚ. ಮಾಮನಿ, ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಶಾಸಕರಾದ ಪಿ. ರಾಜೀವ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಶಾಸಕರಾದ ಮಹೇಶ ಕುಮಠಳ್ಳಿ, ನವದೆಹಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾದ ಶಂಕರಗೌಡ ಐ. ಪಾಟೀಲ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆಶಾ ಐಹೊಳೆ, ಉಪಸ್ಥಿತರಿರುವರು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ. ಹೀರೆಮಠ ಅವರು ತಿಳಿಸಿದ್ದಾರೆ.
ಯೂಥ್ ಕ್ಲಬ್, ನೆಹರೂ ಯುವ ಕೇಂದ್ರ, ಎನ್.ಎಸ್.ಎಸ್. ಸದಸ್ಯರು, ಎನ್.ಸಿ.ಸಿ. ಕೆಡೆಟ್ಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ನಂದಗಡವರೆಗೆ ಸೈಕಲ್ ರ‍್ಯಾಲಿ:
ಇದೇ ಸಂದರ್ಭದಲ್ಲಿ ಕಿತ್ತೂರಿನ ರಾಣ ಚನ್ನಮ್ಮ ವೃತ್ತದಿಂದ ಬೆಳಗಾವಿ ಮಾರ್ಗವಾಗಿ ಖಾನಾಪುರ ತಾಲ್ಲೂಕಿನ ನಂದಗಡದವರೆಗೆ ಸೈಕಲ್ ರ‍್ಯಾಲಿ ನಡೆಯಲಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮಾರ್ಚ್ ೧೨ ರಿಂದ ಮುಂದಿನ ೭೫ ವಾರಗಳ ಕಾಲ ಸ್ವಾತಂತ್ರ್ಯ ಹೋರಾಟದ ಮಹತ್ತರ ಘಟಗಳ ಕುರಿತು ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳು ಹಾಗೂ ಛಾಯಾಚಿತ್ರ ಪ್ರದರ್ಶನಗಳು ನಡೆಯಲಿವೆ.
ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟನಾವಳಿಗಳು, ತ್ಯಾಗ-ಬಲಿದಾನಗೈದ ಮಹನೀಯರು ಹಾಗೂ ಸ್ವಾತಂತ್ರ್ಯೋತ್ತರ ಭಾರತದ ಕುರಿತ ಉಪನ್ಯಾಸ ಕಾರ್ಯಕ್ರಮಗಳು ಕೂಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಏಕಕಾಲಕ್ಕೆ ಆರಂಭಗೊಳ್ಳಲಿವೆ.
ಇದಲ್ಲದೇ ಜಿಲ್ಲೆಯ ಆಯ್ದ ೭೫ ನಗರ ಸ್ಥಳೀಯ ಸಂಸ್ಥೆಗಳು, ಕಂದಾಯ ಹೋಬಳಿ ಹಾಗೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ಮುಂದಿನ ೭೫ ವಾರಗಳ ನಿಗದಿತ ವೇಳಾಪಟ್ಟಿಯಂತೆ ಕಾಲ ಪಾದಯಾತ್ರೆ, ಯೋಗ ಶಿಬಿರಗಳು, ಶ್ರಮದಾನ, ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಭೇಟಿ, ಮ್ಯಾರಾಥಾನ್, ರಂಗೋಲಿ ಸ್ಪರ್ಧೆ, ಬೀದಿನಾಟಕ, ಛಾಯಾಚಿತ್ರ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ