Breaking News

ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನ………..

Spread the love

ಶ್ರೀನಗರ: ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದರೋಡೆಗೆ ಯತ್ನಿಸಿದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಇಬ್ಬರು ಯುವಕರು ಆಟಿಕೆ ಬಂದೂಕು ಹಿಡಿದು ನಾಥನುಸಾ ಗ್ರಾಮದ ಗ್ರಾಮೀಣ ಬ್ಯಾಂಕ್ ಪ್ರವೇಶ ಮಾಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಬ್ಯಾಂಕಿನಲ್ಲಿದ್ದ ಗ್ರಾಹಕರಿಗೆ ಕೈಯಲ್ಲಿರುವ ಗನ್ ಆಟಿಕೆ ಎಂದು ಅನುಮಾನ ಬಂದಿದೆ. ಕೂಡಲೇ ಬ್ಯಾಂಕ್ ಪ್ರವೇಶ ದ್ವಾರದ ಶೆಟರ್ ಎಳೆದು ಇಬ್ಬರನ್ನು ಹಿಡಿದಿದ್ದಾರೆ. ನಂತರ ಬ್ಯಾಂಕ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.


Spread the love

About Laxminews 24x7

Check Also

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವರಿಗೆ ಆಹ್ವಾನ

Spread the loveನವದೆಹಲಿ: ಕರ್ನಾಟಕದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ