Breaking News

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ.

Spread the love

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆ ಬುಧವಾರ ಮತ್ತಷ್ಟು ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ ಈವರೆಗೆ 64 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ತಿಂಗಳು 10 ದಿನಗಳ ಅವಧಿಯಲ್ಲಿ 5,550 ಮಂದಿ ಕೊರೊನಾ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 555 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9.56 ಲಕ್ಷ ದಾಟಿದೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಐದು ಮಂದಿ ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದವರ ಒಟ್ಟು ಸಂಖ್ಯೆ 12,379ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 331 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 9.36 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 70 ಸಾವಿರ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೆ 1.94 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ಸದ್ಯ 7,456 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ 488 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.09 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 22 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 54,287ಕ್ಕೆ ತಲುಪಿದೆ. ಕಲಬುರ್ಗಿಯಲ್ಲಿ 37, ತುಮಕೂರಿನಲ್ಲಿ 36, ಉಡುಪಿಯಲ್ಲಿ 33, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 25 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.


Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ, ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ