Breaking News

ಮಾರ್ಚ್ 11ರಂದು ಬಿಟ್ ಕಾಯಿನ್ ಮೌಲ್ಯ ಭಾರಿ ಏರಿಕೆ

Spread the love

ಬೆಂಗಳೂರು, ಮಾರ್ಚ್11: ಕಳೆದ ಕೆಲ ದಿನಗಳು ಕುಸಿತ ಕಾಣುತ್ತಿದ್ದ ಬಿಟ್ ಕಾಯಿನ್ ಮೌಲ್ಯ ಸತತವಾಗಿ ಏರಿಕೆ ಕಾಣುತ್ತಿದೆ. ಗುರುವಾರ(ಮಾರ್ಚ್ 11)ರಂದು ಈ ಸಮಯಕ್ಕೆ ಏರಿಕೆ ಕಂಡು 55, 000 ಡಾಲರ್ ಗಡಿ ದಾಟಿದೆ.

ಡಿಜಿಟಲ್ ದುಡ್ಡು ಬಿಟ್ ಕಾಯಿನ್ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿ ಅಚ್ಚರಿ ಮೂಡಿಸಿದ ಬಳಿಕ ಭಾರಿ ಕುಸಿತ ಕಂಡಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 27,734 ಡಾಲರ್ ಮೌಲ್ಯ ಹೊಂದಿದ್ದ ಬಿಟ್ ಕಾಯಿನ್ ಶೇ 83.77ರಷ್ಟು ಏರಿಕೆ ಕಂಡಿದೆ.

ಮಾರ್ಚ್ 11ರಂದು ಈ ಸಮಯ(ಸಂಜೆ 5.20)ಕ್ಕೆ ಬಿಟ್ ಕಾಯಿನ್ ಮೌಲ್ಯ:

ಬಿಟ್ ಕಾಯಿನ್ ಬೆಲೆ: $56,215.10

ಒಟ್ಟಾರೆ ಮಾರುಕಟ್ಟೆ ಮೌಲ್ಯ: $1,048,642,714,870

ಒಂದು ಬಿಟ್ ಕಾಯಿನ್ ಬೆಲೆ = 40,76,512.10 ರು

(1 USD=72.65 ರುಪಾಯಿ)

ಕಳೆದ 24 ಗಂಟೆಗಳಲ್ಲಿ ಶೇ 2.68ಷ್ಟು ಏರಿಕೆ ಕಂಡಿದ್ದರೆ, ಈ ವಾರ ಶೇ14.07ರಷ್ಟು ಮೇಲಕ್ಕೇರಿದೆ. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಎಥೆರೆಯಂ(Ethereum) ಕಳೆದ 24 ಗಂಟೆಗಳಲ್ಲಿ ಶೇ 1.81ರಷ್ಟು ಇಳಿಕೆ ಕಂಡು 1,780 ಡಾಲರ್ ಮೌಲ್ಯಕ್ಕಿಳಿದಿದೆ. ಒಟ್ಟಾರೆ $204,354,167,381 ಮೌಲ್ಯ ಹೊಂದಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.


Spread the love

About Laxminews 24x7

Check Also

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Spread the loveಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ