ಹೈದರಾಬಾದ್: ಆಂಧ್ರ ಪ್ರದೇಶ ಸರ್ಕಾರ ಸೆಪ್ಟೆಂಬರ್ 5ಕ್ಕೆ ಶಾಲೆಗಳ ಬಾಗಿಲು ತೆರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೊರೊನಾ ಅಂಕಿ ಸಂಖ್ಯೆಗಳ ಅನುಗುಣವಾಗಿ ಮುಂದಿನ ದಿನಗಳಲ್ಲಿ ಈ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆಂಧ್ರ ಸರ್ಕಾರ ತಿಳಿಸಿದೆ.
ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಜೊತೆಗಿನ ಸಭೆ ಬಳಿಕ ಮಾಧ್ಯಮಗಳ ಜೊತ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಪು ಸುರೇಶ್, ಸೆಪ್ಟೆಂಬರ್ 5ಕ್ಕೆ ಶಾಲೆ ಆರಂಭಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಆದ್ರೆ ಅಂತಿಮ ನಿರ್ಧಾರ ಅಂದಿನ ಸ್ಥಿತಿಗತಿಗಳ ಮೇಲೆಯೇ ನಿರ್ಧಾರವಾಗಲಿದೆ. ಶಾಲೆ ಆರಂಭವಾಗವರೆಗೂ ಮಕ್ಕಳ ಮನೆಗಳಿಗೆ ಅವರ ಪಡಿತರವನ್ನು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ರು.
ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ (ಎಲ್‍ಕೆಜಿ ಮತ್ತು ಯುಕೆಜಿ) ತರಗತಿಗಳನ್ನು ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಾಗುವುದು. ಸ್ಪರ್ಧಾತ್ಮಕ ಪರೀಕಗ್ಷೆಗಳ ತರಬೇತಿಯನ್ನು ಸಹ ಸರ್ಕಾರದಿಂದ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.