Breaking News

ನ್ನಡ ಫಲಕಗಳಿಗೆ ಮಸಿ ಬಳಿದ ಎಂಇಎಸ್, ಶಿವಸೇನೆ ಕಾರ್ಯಕರ್ತರು: ಹಲವರು ಪೊಲೀಸ್ ವಶಕ್ಕೆ

Spread the love

ಬೆಳಗಾವಿ, : ನಾಲ್ಕೈದು ದಿನಗಳ ಹಿಂದೆಯಷ್ಟೇ ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ಭಗವಾ ಧ್ವಜ ಹಾರಿಸಲು ವಿಫಲ ಯತ್ನ ನಡೆಸಿದ್ದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಮತ್ತೆ ಗುರುವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಫಲಕಗಳಿಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ.

ಶಿವಸೇನೆ ಮುಖಂಡ ಸಂಜಯ್ ಪವಾರ್ ಹಾಗೂ ಅವರ ಬೆಂಬಲಿಗರು ಕನ್ನಡದ ಬೋರ್ಡ್ ಗಳಿಗೆ ಮಸಿ ಬಳಿದಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮೀ ಮಂದಿರ ಬಳಿ ಈ ಕೃತ್ಯ ಎಸಗಿದ್ದಾರೆ. ಕನ್ನಡದ ಬೋರ್ಡ್ ಹಾಕದಂತೆ, ಶಿವಸೇನೆ ಕಾರ್ಯಕರ್ತರು ಅಂಗಡಿ ಮಾಲಕರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಎಂಇಎಸ್ ಈ ನಡೆಗೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸ್ಥಳಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿರುವ ಪೊಲೀಸರು ಬೀಗಿ ಬಂದೋಬಸ್ತ್ ಮಾಡಿದ್ದಾರೆ. ಹಲವು ಎಂಇಎಸ್, ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ