Breaking News
Home / ಜಿಲ್ಲೆ / ಚಿಕ್ಕ ಮಂಗಳೂರು / ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು….

ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು….

Spread the love

ಚಿಕ್ಕಮಗಳೂರು: ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು ತಗುಲಿದ್ದು, ಮುಂಜಾಗ್ರತಾ ಕ್ರಮವಾಗಿ 48 ಗಂಟೆಗಳ ಕಾಲ ಪೊಲೀಸ್ ಠಾಣೆಯನ್ನು ಸೀ¯ ಡೌನ್ ಮಾಡಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಠಾಣೆಯಲ್ಲಿ ಕಾರ್ಯನಿರ್ವಹಿಸುವ ನಾಲ್ವರು ಪೇದೆಗಳಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ಪೊಲೀಸರು ಸುಮಾರು 28 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕಿತ ಪೇದೆಗಳಿಗೆ ರೋಗದ ಯಾವುದೇ ಲಕ್ಷಣಗಳು ಇರಲಿಲ್ಲ. ಸದ್ಯ ನಾಲ್ವರು ಪೇದೆಗಳನ್ನು ಚಿಕ್ಕಮಗಳೂರಿನ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಕಳಸ ಪೊಲೀಸ್ ಠಾಣೆಯನ್ನು 48 ಗಂಟೆಗಳ ಕಾಲ ಸೀಲ್‍ಡೌನ್ ಮಾಡಲಾಗಿದ್ದು, ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಮಾಡಲಾಗಿದೆ.

9 ಎಎನ್‍ಎಫ್ ಪೇದೆಗಳಿಗೂ ಸೋಂಕು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಎ.ಎನ್.ಎಫ್ (ನಕ್ಸಲ್ ನಿಗ್ರಹ ಪಡೆ)ಯ ಒಂಬತ್ತು ಸಿಬ್ಬಂದಿಗಳಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಇವರಿಗೆ ಹೇಗೆ ಸೋಂಕು ತಗುಲಿದೆ ಎಂಬುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಏಕೆಂದರೆ ಇವರೆಲ್ಲ ಕಾಡಂಚಿನಲ್ಲಿ ಇರುವವರು. ಜನವಸತಿ ಪ್ರದೇಶದಿಂದಲೂ ದೂರ ಇರುವಂತವರು. ಇದೀಗ ಇವರಿಗೂ ಸೋಂಕು ತಗುಲಿರುವುದು ಯಕ್ಷ ಪ್ರಶ್ನೆಯಾಗಿದೆ.

ಕೊರೊನಾ ಸೋಂಕಿತ ಎಎನ್‍ಎಫ್ ಸಿಬ್ಬಂದಿಗಳನ್ನು ಚಿಕ್ಕಮಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಗೆ ಸೋಂಕು ತಗುಲಿರುವುದರಿಂದ ಇನ್ನುಳಿದ ಸಿಬ್ಬಂದಿಗಳಿಗೂ ಕೂಡ ಆತಂಕ ಎದುರಾಗಿದೆ. ಜನವಸತಿ ಪ್ರದೇಶದಿಂದ ದೂರ ಇರುವ ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿಗಳು ಹಾಗೂ ರೋಗದ ಲಕ್ಷಣವೇ ಇಲ್ಲದ ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ದೃಢ ಪಟ್ಟಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆಯಾ ಎಂಬ ಪ್ರಶ್ನೆ ಎದುರಾಗಿದೆ.


Spread the love

About Laxminews 24x7

Check Also

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

Spread the loveಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ