Breaking News
Home / ರಾಜ್ಯ / ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಐವರು ಎಸ್ ಐಟಿ ವಶಕ್ಕೆ!

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಐವರು ಎಸ್ ಐಟಿ ವಶಕ್ಕೆ!

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ(ಎಸ್‌ಐಟಿ) ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಗೆ ಸಿಡಿ ನೀಡಿದ ಆರೋಪದಡಿ ಓರ್ವ ಯುವಕನನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್.ಐ.ಟಿ ಮೂಲಗಳು ತಿಳಿಸಿವೆ.

ಐವರ ಕಾಲ್ ರೆಕಾರ್ಡ್ ಆಧಾರದ ಮೇಲೆ ಬೆಂಗಳೂರಿನ ಯಶವಂತಪುರದ ಓರ್ವ, ಚಾಮರಾಜಪೇಟೆಯಲ್ಲಿ ಒಬ್ಬ, ವಿಜಯನಗರದಲ್ಲಿ ರೂಮ್ ಮಾಡಿಕೊಂಡಿದ್ದ ಓರ್ವ ಹಾಗೂ ಚಿಕ್ಕಮಗಳೂರಿನ ಆಲ್ದೂರಿನ ಒಬ್ಬ, ರಾಮನಗರದ ಮೂಲದ ಯುವತಿ ಸೇರಿ ಐವರನ್ನು ವಶಕ್ಕೆ ಪಡೆಯಲಾಗಿದೆ.

ಸದ್ಯ ಬಂಧಿತರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಯ ಬಾಯ್ ಫ್ರೆಂಡ್ ಕೂಡ ಸೇರಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಇನ್ನು, ಚಾಮರಾಜಪೇಟೆಯಲ್ಲಿ ವಶಕ್ಕೆ ಪಡೆಯಲಾದ ಯುವಕ ಓರ್ವ ಟೆಕ್ ಎಕ್ಸ್ ಫರ್ಟ್ ಆಗಿದ್ದು, ಸಿಡಿಯನ್ನು ಯುಟ್ಯೂಬ್ ಗೆ ರಷ್ಯಾದಿಂದ ಅಲ್ಲ ಬದಲಾಗಿ ಬೆಂಗಳೂರಿನಲ್ಲೇ ಅಪ್ ಲೋಡ್ ಮಾಡಿದ್ದ ಎನ್ನಲಾಗಿದೆ.

ಪ್ರಕರಣದ ಕಿಂಗ್ ಪಿನ್ ಗಳಿಬ್ಬರೂ ಆಂಧ್ರಪ್ರದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಓರ್ವನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ನಾಲ್ವರನ್ನು ನಗರದ ಸಿಐಡಿ ಕಚೇರಿಯಲ್ಲಿ ವಿಚಾರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ