Breaking News

ಬಿಎಸ್ ವೈ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ: ಕಾಂಗ್ರೆಸ್

Spread the love

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಗುರುವಾರ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಪದವಿ ಮುಂದಿರುವ ಉಪ ಹೋಗಿ ಆದಷ್ಟು ಬೇಗ ಮುಖ್ಯಮಂತ್ರಿಯಾಗಲಿ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದರು.

ಈ ಹೇಳಿಕೆಯನ್ನೇ ದಾಳವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್, ಬಿಎಸ್ ಯಡಿಯೂರಪ್ಪ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಲಾಗದೆ ಸದನದಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಪತ್ತೆಯಾದರೆ, ಇತ್ತ ಡಿವಿ ಸದಾನಂದಗೌಡ ಮುಖ್ಯಮಂತ್ರಿ ಗಾದಿಗೆ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಹೆಸರನ್ನು ತೇಲಿಬಿಡುತ್ತಿದ್ದಾರೆ. ಬಿಎಸ್ ವೈ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ ಎಂದು ಹೇಳಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ