Breaking News

ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ : ಮಹಾರಾಷ್ಟ್ರ ಸರ್ಕಾರ

Spread the love

ಪುಣೆ : ಕೊರೋನಾ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿದೆ .

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೊರೋನಾ ಅಬ್ಬರ ತಡೆಯುವ ನಿಟ್ಟಿನಲ್ಲಿ ಶಾಲೆ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ . ಮುಂದಿನ ಪರಿಸ್ಥಿತಿಯನ್ನ ಅವಲೋಕಿಸಿ ಶಾಲೆಗಳನ್ನ ಪುನರಾಂಭಿಸಬೇಕೆ ಅಥವಾ ಬಂದ್ ಮಾಡಬೇಕೆ ಅನ್ನೋದನ್ನ ನಿರ್ಧರಿಸಲಾಗುತ್ತದೆ ಎಂದು ಅಜಿತ್ ಪವಾರ್ ತಿಳಿಸಿದ್ದಾರೆ.

ಪುಣೆಯಲ್ಲಿ ಈಗಾಗಲೇ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿದ್ದು, ಪುಣೆಯಲ್ಲಿ ಗುರುವಾರ 2840 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ.


Spread the love

About Laxminews 24x7

Check Also

ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ”

Spread the love“ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ