Breaking News

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; ಯುವತಿಯರನ್ನು ಅಕ್ರಮ ಕಳ್ಳ ಸಾಗಾಟ ಮಾಡಿದ ಪಿಂಪ್ ಬಂಧನ

Spread the love

ಬೆಂಗಳೂರು (ಜುಲೈ 22); ನಗರದಲ್ಲಿ ವೇಶ್ಯಾವಾಟಿಕೆ ನಡೆಸುವ ಸಲುವಾಗಿ ಯುವತಿಯರನ್ನು ಅಕ್ರಮವಾಗಿ ಕಳ್ಳ ಸಾಗಾಣೆ ನಡೆಸುತ್ತಿದ್ದ ಪಿಂಪ್‌ ಸ್ವಾತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಮೊದಲ ಬಾರಿಗೆ KPIT (Karnataka prevention of illegal trafficking act) ಕಾಯ್ದೆಯ ಅಡಿ ಬಂಧಿಸಿದ್ದಾರೆ.

ನಗರದಲ್ಲಿ ಸ್ವಾತಿ ಎಂಬ ಮಹಿಳೆ ವಿವಿಧೆಡೆ ಮಸಾಜ್‌ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹಲವು ಬಾರಿ ಈಕೆಯನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ಮತ್ತೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದರು. ಅಲ್ಲದೆ, ವೇಶ್ಯಾವಾಟಿಕೆಗಾಗಿ ಯುವತಿಯರನ್ನ ಆಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; ಯುವತಿಯರನ್ನು ಅಕ್ರಮ ಕಳ್ಳ ಸಾಗಾಟ ಮಾಡಿದ ಪಿಂಪ್ ಬಂಧನ

ನಗರದಲ್ಲಿ ಸ್ವಾತಿ ಎಂಬ ಮಹಿಳೆ ವಿವಿಧೆಡೆ ಮಸಾಜ್‌ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹಲವು ಬಾರಿ ಈಕೆಯನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ಮತ್ತೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದರು. ಅಲ್ಲದೆ, ವೇಶ್ಯಾವಾಟಿಕೆಗಾಗಿ ಯುವತಿಯರನ್ನ ಆಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.ಹೀಗಾಗಿ ಇಂದು ಸ್ವಾತಿ ಎಂಬ ಪಿಂಪ್ ಅನ್ನು ಮತ್ತೆ ಬಂಧಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು, ಆಕೆಯನ್ನು KPIT ಕಾಯ್ದೆಯ ಅಡಿಯಲ್ಲಿ ಬಂಧಿಸಿದ್ದಾರೆ. ಈ ಕಾಯ್ದೆಯಡಿನ್ವಯ ಒಂದು ವರ್ಷ ಆರೋಪಿಗೆ ಜಾಮೀನು ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ