Breaking News
Home / ರಾಜ್ಯ / ಭದ್ರಾವತಿ ಶಾಸಕ ಸಂಗಮೇಶ್’ಗೆ ಬೆಂಬಲ: ಶಿವಮೊಗ್ಗದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜು

ಭದ್ರಾವತಿ ಶಾಸಕ ಸಂಗಮೇಶ್’ಗೆ ಬೆಂಬಲ: ಶಿವಮೊಗ್ಗದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜು

Spread the love

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಚಲೋ ಆಯೋಜಿಸಿದೆ.

ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಸಂಗಮೇಶ್ ಅವರನ್ನು ಅಮಾನತುಗೊಳಿಸಲಾದ ಆದೇಶವನ್ನು ವಾಪಸ್ ನಡೆಯಬೇಕು ಎಂದು ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಕೆಎಸ್‌ಆರ್’ಟಿಸಿ ಬಸ್ ನಿಲ್ದಾಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಆನಂತರ ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಪ್ರತಿಭಟನಾ ಸಭೆ ಕೂಡ ಹಮ್ಮಿಕೊಂಡಿದೆ. ಡಿಕೆ.ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಎಸ್.ಆರ್.ಪಾಟೀಲ್, ಡಾ.ಜಿ.ಪರಮೇಶ್ವರ್, ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಸೇರಿದಂತೆ ಬಹುತೇಕ ಎಲ್ಲಾ ಕಾಂಗ್ರೆಸ್ ನಾಯಕರು, ಶಾಸಕರು ಭಾಗವಹಿಸಲಿದ್ದಾರೆ. 25 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಟನೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದೆ.

ಮಾ.28 ರಂದು ಭದ್ರಾವತಿ ಕನಕ ಮಂಟಪದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾವಳಿ ವೇಳೆ ಜೈ ಶ್ರೀ ರಾಮ್ ಎಂಬ ಘೋಷಣೆ ಕೂಗಿದ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.

ಘಟನೆಯಲ್ಲಿ ಶಾಸಕ ಸಂಗಮೇಶ್ ಹಾಗೂ ಅವರ ಪುತ್ರರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಜಾತಿ ನಿಂದನೆ ಮತ್ತು ಹಲ್ಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಒಬ್ಬ ಪುತ್ರ ಬಸವೇಶ್ ಬಂಧನಕ್ಕೆ ಒಳಗಾಗಿದ್ದಾರೆ. ಶಾಸಕರಿಗೆ ಜಾತಿ ನಿಂದನೆ ಪ್ರಕರಣಕ್ಕೆ ಮಾತ್ರ ನಿರೀಕ್ಷಣಾ ಜಾಮೀನು ನೀಡಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ