ಬೆಂಗಳೂರು: ಎಸ್‌ಐಟಿ ತನಿಖೆಗೆ ವಹಿಸಿರುವ ಸಿಡಿ ಪ್ರಕರಣದ ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಡಿಯೋದಲ್ಲಿ ಯಾರಿದ್ದಾರೆ ಎನ್ನುವುದಕ್ಕಿಂತ ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು ಹಾಗೂ ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದು ಹೇಳಿರುವುದು ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು ಎಂದು ತಿಳಿಸಿದರು.
ಸಿಡಿ ಪ್ರಕರಣದ ವಿಚಾರಣೆಗೆ ಎಸ್‌ಐಟಿ ರಚಿಸಿದ್ದಾರೆ. ನೋಡೋಣ ಏನು ಮಾಡುತ್ತಾರೆ. ಸಿಡಿ ನಕಲಿ ಅಂದಿದ್ದಾರೆ. ಕೆಲವು ನಾಯಕರು ನಮ್ಮ ಪಕ್ಷದ ಹೆಸರನ್ನು ಎತ್ತಿದ್ದಾರೆ. ಈ ವಿಚಾರ ಸಾರ್ವಜನಿಕವಾಗಿದ್ದು, ಎಲ್ಲದರ ಬಗ್ಗೆ ಪರೀಕ್ಷೆ ನಡೆಸಲಿ. ಅವರು ನಮ್ಮ ಮೇಲೆ ಏನೇ ಆರೋಪ ಮಾಡಲಿ, ಈ ವಿಚಾರ ತನಿಖೆಯಾಗಲಿ ಎಂಬುದಷ್ಟೇ ನಮ್ಮ ಆಗ್ರಹ ಎಂದು ಹೇಳಿದರು
Laxmi News 24×7