ಬೆಂಗಳೂರು: ರಾಸಲೀಲೆ ಸಿಡಿ ಕೇಸ್ ನಲ್ಲಿ ಐವರನ್ನು ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದು, ಆದಷ್ಟು ಬೇಗನೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಸೋಮವಾರದ ನಂತರ ಇಬ್ಬರು ಇಲ್ಲವೇ ಮೂವರ ವಿರುದ್ಧ ದೂರು ನೀಡುತ್ತೇವೆ. ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ. ತಿಮಿಂಗಿಲಗಳಿಗೆ ಸಹಕಾರ ನೀಡಿದವರನ್ನು ವಶಕ್ಕೆ ಪಡೆಯಲಾಗಿದೆ. ದೊಡ್ಡ ತಿಮಿಂಗಿಲಗಳನ್ನೂ ಇನ್ನು ವಶಕ್ಕೆ ಪಡೆದಿಲ್ಲ. ಆರೋಪಿಗಳಿಗೆ ಬುದ್ಧಿ ಕಲಿಸಬೇಕಾದರೆ ಎಲ್ಲರನ್ನೂ ಬಂಧಿಸಬೇಕು ಎಂದು ಹೇಳಿದ್ದಾರೆ.
ಸಾಕ್ಷಾಧಾರಗಳನ್ನು ಸಂಗ್ರಹ ಮಾಡಲಾಗುತ್ತಿದೆ. ನಾವು ಗಾಳಿಯಲ್ಲಿ ಗುಂಡು ಹೊಡೆಯಲ್ಲ, ಪಕ್ಕಾ ಎವಿಡೆನ್ಸ್ ಕಲೆಕ್ಟ್ ಮಾಡಿ ಕೊಡುತ್ತೇವೆ. ಯುವತಿ ಜೊತೆಗಿರುವ ಫೋಟೋ ನಮಗೆ ಲಭ್ಯವಾಗಿದ್ದು, ನಾವು ಕಾನೂನು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.
Laxmi News 24×7