Breaking News

ನಗರಸಭೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ -ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

Spread the love

ಉಡುಪಿ ಮಾರ್ಚ್ 13: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನೇಜಾರಿನ ಇಸ್ಮಾಯಿಲ್‌(55) ಹಾಗೂ ಹೂಡೆಯ ಸೊಹೇಲ್‌(28) ಎಂದು ಗುರುತಿಸಲಾಗಿದೆ. ಉಡುಪಿ ನಗರಸಭೆಯ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಎಂಬವರಿಗೆ ಕಸದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ರಸ್ತೆ ಮಧ್ಯೆ ಹಲ್ಲೆ ನಡಸಿದ್ದಾರೆ. ಈ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಪಿಗಳು ಸಿಟಿ ಬಸ್‌ ನಿಲ್ದಾಣದ ಬಳಿ ಕಸ ಸಂಗ್ರಹಕ್ಕೆ ವಾಹನದೊಂದಿಗೆ ಹೋಗಿದ್ದಾರೆ. ಆಗ ಆರೋಪಿಗಳ ಅಂಗಡಿಯಲ್ಲಿ ಹಸಿ ಮತ್ತು ಒಣ ಕಸ ಬೆರೆಸಿರುವುದನ್ನು ಸಂಜು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಅಂಗಡಿಯವರಿಗೆ ಮತ್ತು ಸಂಜು ಮಧ್ಯೆ ವಾಗ್ವಾದ ನಡೆಯುತ್ತಿರುವ ಸಂದರ್ಭ ಸಿಟ್ಟಿಗೆದ್ದ ಇಸ್ಮಾಯಿಲ್‌ ಮತ್ತು ಸೊಹೇಲ್‌, ಸಂಜುವಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ