Breaking News
Home / Uncategorized / ನಾವು ಗಾಳಿಯಲ್ಲಿ ಗುಂಡು ಹೊಡಿಯಲ್ಲ, ಪಕ್ಕಾ ಸಾಕ್ಷ್ಯ ಇಟ್ಟುಕೊಂಡು ದೂರು ನೀಡ್ತೀವಿ: ಬಾಲಚಂದ್ರ ಜಾರಕಿಹೊಳಿ

ನಾವು ಗಾಳಿಯಲ್ಲಿ ಗುಂಡು ಹೊಡಿಯಲ್ಲ, ಪಕ್ಕಾ ಸಾಕ್ಷ್ಯ ಇಟ್ಟುಕೊಂಡು ದೂರು ನೀಡ್ತೀವಿ: ಬಾಲಚಂದ್ರ ಜಾರಕಿಹೊಳಿ

Spread the love

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ತಂಡದ ಹಿರಿಯ ಅಧಿಕಾರಿಗಳು ನಿನ್ನೆ ನಡೆಸಿದ ಸಭೆಯಲ್ಲಿ ಪ್ರಕರಣದ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ಎಫ್​ಐಆರ್​ ಹಾಕುವ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲು ತೀರ್ಮಾನಿಸಿದ್ದು, ಎಫ್‌ಐಆರ್​ ದಾಖಲಿಸದಿದ್ದರೆ ಸಮಗ್ರ ತನಿಖೆ ಸಾಧ್ಯವಿಲ್ಲ ಹೀಗಾಗಿ ತನಿಖೆಗೆ ಸಹಕಾರಿಯಾಗಲು ಈ ಮಾರ್ಗವನ್ನು ಅನುಸರಿಸಬೇಕೆಂದು ಅಭಿಪ್ರಾಯಪಟ್ಟಿದ್ದಾಗಿ ತಿಳಿದುಬಂದಿದೆ. ರಾಜಕಾರಣಿಯ ವಿರುದ್ಧ ಸಿಡಿ ಷಡ್ಯಂತ್ರ ನಡೆಯುತ್ತಿರುವ ಅನುಮಾನ ದಟ್ಟವಾಗುತ್ತಿದ್ದು ಇದೇ ಅಂಶದ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ದೂರು ದಾಖಲಾದರೆ ಈ ಕೃತ್ಯದಲ್ಲಿ ಪಾಲ್ಗೊಂಡವರಿಗೆ ಸಂಕಷ್ಟ ನಿಶ್ಚಿತ ಎಂಬ ಮಾತುಗಳೂ ಕೇಳಿಬರುತ್ತಿವೆ.

ಸಿಡಿ ಪ್ರಕರಣ ಕ್ಷಣಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣದ ಆರೋಪಿಗಳ ಜೊತೆ ನಿರಂತರ ಸಂಪರ್ಕ ಹೊಂದಿರುವವ ವಿಚಾರಣೆ ಮಾಡಲಾಗುತ್ತಿದೆ. ಸದ್ಯ ಈಗಾಗಲೇ ವಿಚಾರಣೆ ಎದುರಿಸಿದ್ದ ಓರ್ವನ ಸಂಪರ್ಕದಲ್ಲಿರುವ ಪುಣೆಯ ಪಬ್‌ ಮಾಲೀಕನನ್ನ ಎಸ್​ಐಟಿ ವಿಚಾರಣೆಗೆ ಒಳಪಡಿಸಿದೆ. ಬೀದರ್‌ನ ಭಾಲ್ಕಿಯಲ್ಲಿ ಈ ಸಂಬಂಧ ವಿಚಾರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ, ದೇವನಹಳ್ಳಿ ಬಳಿಯ ವಿಜಯಪುರದಲ್ಲಿ ಹ್ಯಾಕರ್​ ಸಹೋದರನನ್ನು ವಶಕ್ಕೆ ಪಡೆದ SIT ಅಧಿಕಾರಿಗಳು, ಆತನಿಂದಲೂ ಮಾಹಿತಿ ಪಡೆಯುತ್ತಿದ್ದಾರೆ.

ಬ್ಯಾಂಕ್​ ವಹಿವಾಟು, ಮೊಬೈಲ್​ ಕರೆ ಸೇರಿದಂತೆ ಇಂಚಿಂಚೂ ವಿಚಾರಣೆ
ಸಿಡಿ ಜಾಲದಲ್ಲಿ ಈಗಾಗಲೇ SIT ಐವರ ಮಾಹಿತಿ ಸಂಗ್ರಹಿಸಿ ತ್ವರಿತಗತಿಯಲ್ಲಿ ವಿಚಾರಣೆ ಮುಂದುವರೆಸಿದೆ. ಆ ವ್ಯಕ್ತಿಗಳು ಒಂದು ವರ್ಷದಿಂದ ನಡೆಸಿರುವ ಬ್ಯಾಂಕ್ ವಹಿವಾಟು, ಮೊಬೈಲ್ ಕರೆಗಳ ಬಗ್ಗೆಯೂ ನಿಗಾ ವಹಿಸಿರುವ ಎಸ್​ಐಟಿ, ಇಂಚಿಂಚೂ ಮಾಹಿತಿ ಜಾಲಾಡುತ್ತಿದೆ. ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳಿಗಾಗಿ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಶೋಧ ಕಾರ್ಯ ಭರದಿಂದ ಸಾಗಿದೆ. ರಾಜ್ಯದಲ್ಲಿ ಬೆಂಗಳೂರು ನಗರ, ನಾಗರಬಾವಿ, ಶಂಕರಮಠ, ನವರಂಗ್, ಬೀದರ್​, ವಿಜಯಪುರ, ತುಮಕೂರಿನಲ್ಲಿ ಎಸ್‌ಐಟಿಯಿಂದ ಹುಡುಕಾಟ ನಡೆಯುತ್ತಿದ್ದು ಆದಷ್ಟು ಬೇಗ ಅವರನ್ನು ಪತ್ತೆ ಹಚ್ಚುವ ವಿಶ್ವಾಸದಲ್ಲಿ ಎಸ್​ಐಟಿ ಅಧಿಕಾರಿಗಳಿದ್ದಾರೆ.

ನಾವು ಗಾಳಿಯಲ್ಲಿ ಗುಂಡು ಹೊಡಿಯಲ್ಲ, ಪಕ್ಕಾ ಸಾಕ್ಷ್ಯ ಇಟ್ಟುಕೊಂಡು ದೂರು ನೀಡ್ತೀವಿ: ಬಾಲಚಂದ್ರ ಜಾರಕಿಹೊಳಿ


Spread the love

About Laxminews 24x7

Check Also

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

Spread the love ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ