Breaking News

BIG BREAKING NEWS: ಸಾಹುಕಾರ್ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ದಿನೇಶ್ ಕಲ್ಲಹಳ್ಳಿ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಸಾಹುಕಾರ್ ನನ್ನು ಕೆಳಗಿಳಿಸಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಈಗಾಗಲೇ ನಾನು ನೀಡಿದ್ದ ದೂರನ್ನು ಕೂಡ ವಾಪಸ್ ಪಡೆದುಕೊಂಡಿದ್ದೇನೆ. ನಿನ್ನೆ ಎಸ್ ಐ ಟಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಐವರಲ್ಲಿ ಓರ್ವನ ಪರಿಚಯ ಮಾತ್ರ ಇದೆ ಎಂದು ಹೇಳಿದ್ದಾರೆ.

ಎಸ್ ಐ ಟಿಯಿಂದ ವಿಚಾರಣೆಗೆ ಹಾಜರಾಗುವಂತೆ ನನಗೆ ಯಾವುದೇ ನೋಟೀಸ್ ಬಂದಿಲ್ಲ. ನೋಟೀಸ್ ನೀಡಿದರೆ ವಿಚಾರಣೆಗೆ ಹಾಜರಾಗಲು ಸಿದ್ಧ ಎಂದು ಹೇಳಿದರು.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ