Breaking News

ವಿಜಯಪುರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಮೂವರ ಬಂಧನ

Spread the love

ವಿಜಯಪುರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶಕ್ಕೆ ಪಡೆದಿರುವ ಪೊಲೀಸರು, ದೊಂಡಿಬಾ ಜರಕ, ಆಕಾಶ ಬೋರಕರ, ಯಲ್ಲಪ್ಪ ಕರೆಪ್ಪನವರ ಎಂಬ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 8 ಕೆ.ಜಿ. ಗಾಂಜಾ, ಒಂದು ಬೈಕ್ ವಶಕ್ಕೆ ಪಡೆದ್ದಾರೆ. ಸಿಪಿಐ ಸಂಗಮೇಶ ಪಾಲಬಾವಿ ನೇತೃತ್ವದಲ್ಲಿ ಪಿಎಸ್‌ಐ ಆನಂದ ಠಕ್ಕಣನವರ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿತ್ತು.

ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ