Breaking News
Home / ರಾಜ್ಯ / ಎಸ್‌ಐಟಿ’ ತನಿಖೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಹತ್ವದ ಪ್ರತಿಕ್ರಿಯೆ!

ಎಸ್‌ಐಟಿ’ ತನಿಖೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಹತ್ವದ ಪ್ರತಿಕ್ರಿಯೆ!

Spread the love

ಬೆಂಗಳೂರು, ಮಾ. 13: ರಮೇಶ್ ಜಾರಕಿಹೊಳಿ ಅವರ ‘ಸಿಡಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದು, ಅವರ ಹೇಳಿಕೆ ಕುತೂಹಲ ಮೂಡಿಸಿದೆ. ಈಗಾಗಲೇ ‘ಸಿಡಿ’ ಕುರಿತು ಎಸ್‌ಐಟಿ ತನಿಖೆ ಆರಂಭಿಸಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂಬ ಮಾಹಿತಿಯಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗದೆ ಸರಿಯಾದ ತನಿಖೆ ನಡೆಸುವುದು ಅಸಾಧ್ಯ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸುತ್ತಾರಾ ಎಂಬ ಪ್ರಶ್ನೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಸಿಡಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸುತ್ತಾರಾ? ಎಂಬ ಪ್ರಶ್ನೆಗೆ ಬಸವರಾಜ್ ಬೊಮ್ಮಾಯಿ ಅವರು ‘ನೋ ಕಮೆಂಟ್ಸ್‌’ ಎಂದಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದಲ್ಲಿ ಮಾತನಾಡಿರುವ ಅವರು, ತನಿಖೆ ಮಾಡಲು ಎಸ್‌ಐಟಿಗೆ ಸಂಪೂರ್ಣವಾದ ಸ್ವಾತಂತ್ರ್ಯವನ್ನು ಕೊಟ್ಟಿದ್ದೇವೆ. ಹೀಗಾಗಿ ನಾನು ಏನನ್ನೂ ಹೇಳುವುದಿಲ್ಲ. ಎಸ್‌ಐಟಿ ಸೂಕ್ತ ತನಿಖೆ ನಡೆಸುತ್ತಿದೆ ಎಂದಿದ್ದಾರೆ.

ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೊಂದಿಗೆ ಜತೆ ಈಗಾಗಲೇ ಮಾತನಾಡಿದ್ದೇವೆ. ಆಯೋಗ ರಚನೆ ಮಾಡಿದ್ದೇವೆ. ಹೀಗಾಗಿ ವಿಧಾನಸಭೆಯಲ್ಲಿ ಪ್ರತಿಭಟನೆ ಬೇಡ ಅಂತಾ ಮನವಿ ಮಾಡಿದ್ದೇನೆ. ಆಯೋಗ ನೊಟೀಸ್ ನೀಡಿದೆ. ಅವರು ಆಯೋಗದ ಮುಂದೆ ಹಾಜರಾಗುತ್ತಾರೋ ಇಲ್ಲವೋ ಎಂಬುದನ್ನು ಈಗಲೇ ಊಹೆ ಮಾಡಿ ಹೇಳುವದಕ್ಕೆ ಆಗುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಚಲೋ ಮಾಡುತ್ತಿದ್ದಾರೆ. ಏನಾಗುತ್ತೋ ನೋಡೋಣ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ